Karnataka news paper

ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ 2023 ವಿಧಾನಸಭೆ ಚುನಾವಣೆ ಎದುರಿಸುತ್ತೇವೆ: ನಳಿನ್ ಕುಮಾರ್ ಕಟೀಲ್



ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ 2023 ವಿಧಾನಸಭೆ ಚುನಾವಣೆ ಎದುರಿಸುತ್ತೇವೆ: ನಳಿನ್ ಕುಮಾರ್ ಕಟೀಲ್

ನಳಿನ್ ಕುಮಾರ್ ಕಟೀಲ್

The New Indian Express

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ತೆರೆ ಎಳೆದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. 2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆವರೆಗೂ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆಂದು ಹೇಳಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕವೂ ಇಂತಹ ಊಹಾಪೋಹಗಳು ಹಬ್ಬಿದ್ದವು, ಆದರೆ ಅವರು ಎರಡೂವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರೆದರು. ಮುಂದಿನ 2023ರ ಚುನಾವಣೆ ವೇಳೆಗೂ ಬೊಮ್ಮಾಯಿಯವರೇ ಮುಖ್ಯಮಂತ್ರಿ ಆಗಿರುತ್ತಾರೆ. ಮುಖ್ಯಮಂತ್ರಿ ಬದಲಾವಣೆ ಕೇವಲ ಕಪೋಲಕಲ್ಪಿತ. ಬಿಜೆಪಿ ಸರ್ಕಾರದಲ್ಲಿ ಅರಾಜಕತೆ ಹುಟ್ಟುಹಾಕಲು ಇಂತಹ ಸುದ್ದಿ ಹರಡಿಸುತ್ತಾರೆ.  ಮುಂದಿನ ಚುನಾವಣೆ ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.

ಸಿಎಂಗೆ ಯಾವುದೇ ಅನಾರೋಗ್ಯ ಇಲ್ಲ, ಕಾಲು ನೋವು ಮಾತ್ರ ಇದೆ. ಅದಕ್ಕೆ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬೊಮ್ಮಾಯಿ ಅವರು ವಿದೇಶಕ್ಕೂ ಹೋಗಲ್ಲ, ಅವರ ಕಾಲಿನ ಸಮಸ್ಯೆಗೆ ಇಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಾರೆ ಎಂದಿದ್ದಾರೆ.




    Read more