ಬೆಂಗಳೂರು: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (ಎನ್‌ಟಿಎ) ಭಾನುವಾರ ನಡೆಸಿದ ‘ಯುಜಿಸಿ–ಎನ್‌ಇಟಿ’ ಕನ್ನಡ ಐಚ್ಛಿಕ ಭಾಷೆಯ ಪ್ರಶ್ನೆ ಪತ್ರಿಕೆಯ ಪ್ರಶ್ನೆಗಳು ಹಿಂದಿ ಭಾಷೆಯಲ್ಲಿದ್ದ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ‘ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ’ ಎಂದಿದ್ದಾರೆ.
ಈ ಕುರಿತು #ಹಿಂದಿಹೇರಿಕೆನಿಲ್ಲಿಸಿ ಹ್ಯಾಷ್‌ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಅವರು, ‘ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇಪದೆ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ. ಕೇಂದ್ರ ಸರಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ’ ಎಂದು ತಿಳಿಸಿದ್ದಾರೆ.
‘ನಿನ್ನೆ ರಾಷ್ಟ್ರೀಯ ಪರಿಕ್ಷಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಯುಜಿಸಿ-ಎನ್‌ಇಟಿ ಕನ್ನಡ ಐಚ್ಛಿಕ ಭಾಷಾ ಪಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲೇ ಇದ್ದವು. ಅದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿ ಪರೀಕ್ಷೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ. ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಇಂಥ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ. ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ?’ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಕನ್ನಡ ಐಚ್ಛಿಕ ಪತ್ರಿಕೆಯಲ್ಲಿ ‘ಹಿಂದಿ’ ಪ್ರಶ್ನೆಗಳು!
‘ರೈಲ್ವೆ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರಕಾರದ ಇನ್ನು ಹಲವಾರು ಉದ್ಯೋಗ ಅವಕಾಶಗಳಲ್ಲಿ ಕನ್ನಡದ ಪ್ರತಿಭಾವಂತ ಯುವಜನರಿಗೆ ಅನ್ಯಾಯ ಆಗುತ್ತಿದೆ. ಕನ್ನಡಿಗರ ಕಡೆಗಣನೆ ದೇಶಕ್ಕೆ ಒಳ್ಳೆಯದಲ್ಲ. ನಮ್ಮ ಮೌನ ನಮ್ಮ ದೌರ್ಬಲ್ಯವಲ್ಲ ಎಂಬುದು ನೆನಪಿರಲಿ. ಈ ಅನ್ಯಾಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೂಡಲೇ ಪರಿಕ್ಷಾ ಸಂಸ್ಥೆಯು ಆಗಿರುವ ಲೋಪ ಸರಿಮಾಡಿ ಪುನಃ ಪರೀಕ್ಷೆ ನಡೆಸಬೇಕು. ಎರಡು ವರ್ಷಗಳಿಂದ ಪರಿಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದ್ದಾರೆ.
‘ಪರೀಕ್ಷೆ ಅವ್ಯವಸ್ಥೆ ಆಗರವಾಗಿತ್ತು ಎನ್ನುವುದು ತಿಳಿದುಬಂದಿದೆ. ಅದನ್ನು ಸರಿಪಡಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.
“ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ.”
ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇಪದೆ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ. ಕೇಂದ್ರ ಸರಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ.1/6 pic.twitter.com/quJpxbr5Mr
— H D Kumaraswamy (@hd_kumaraswamy) December 27, 2021
ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಅಲ್ಲದೆ, ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಇಂಥ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ. ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ?3/6
— H D Kumaraswamy (@hd_kumaraswamy) December 27, 2021
ಈ ಅನ್ಯಾಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೂಡಲೇ ಪರಿಕ್ಷಾ ಸಂಸ್ಥೆಯು ಆಗಿರುವ ಲೋಪ ಸರಿಮಾಡಿ ಪುನಾ ಪರೀಕ್ಷೆ ನಡೆಸಬೇಕು. ಎರಡು ವರ್ಷಗಳಿಂದ ಪರಿಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ವಹಿಸಬೇಕು.5/6
— H D Kumaraswamy (@hd_kumaraswamy) December 27, 2021