ಹೈಲೈಟ್ಸ್:
- ಹುಬ್ಬಳ್ಳಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ
- ನಡೆಯುತ್ತಾ ನಾಯಕತ್ವ ಬದಲಾವಣೆ ಚರ್ಚೆ?
- ಕುತೂಹಲ ಕೆರಳಿಸಿದ ಕೋರ್ ಕಮಿಟಿ ಸಭೆ
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಬೆಳವಣಿಗೆ, ಪಕ್ಷ ಸಂಘಟನೆ ಹಾಗೂ ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.
ನಾಯಕತ್ವ ಬದಲಾವಣೆ: ಎಲ್ಲವೂ ಮಾಧ್ಯಮ ಸೃಷ್ಟಿ ಎಂದ ಬಸವರಾಜ ಬೊಮ್ಮಾಯಿ
ನಾಯಕತ್ವ ಬದಲಾವಣೆ ಚರ್ಚೆ?
ಈ ನಡುವೆ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತಾಗಿ ಚರ್ಚೆ ನಡೆಯುತ್ತಿದ್ದು ಕೋರ್ ಕಮಿಟಿ ಸಭೆಯಲ್ಲೂ ಈ ಕುರಿತಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ. ನಾಯಕತ್ವ ಬದಲಾವಣೆಯ ಬಗ್ಗೆ ಸಿಎಂ ಸೇರಿದಂತೆ ಬಿಜೆಪಿ ಪ್ರಮುಖರು ನಿರಾಕರಣೆ ಮಾಡಿದರೂ, ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕೋರ್ ಕಮಿಟಿ ಸಭೆಯಲ್ಲೂ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಅಲ್ಲಗಳೆಯುವ ಹಾಗಿಲ್ಲ.
ಸಭೆಯಲ್ಲಿ ಜೆಪಿ ನಡ್ಡಾ ಭಾಗಿ!
ಹುಬ್ಬಳ್ಳಿಯಲ್ಲಿ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗಿಯಾಗಲಿದ್ದಾರೆ. ಜೆಪಿ ನಡ್ಡಾ ಭಾಗಿ ಸಹಜವಾಗಿ ಕುತೂಹಲಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ರಾಜ್ಯ ಮಟ್ಟದ ಬಿಜೆಪಿ ಕಾರ್ಯಕಾರಣಿ ಸಭೆಗಳಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಪಾಲ್ಗೊಳ್ಳುವುದಿಲ್ಲ. ಆದರೆ ಹುಬ್ಬಳ್ಳಿಯಲ್ಲಿ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪಾಲ್ಗೊಳ್ಳುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.