Karnataka news paper

ಪಾಕ್ ಮುಸ್ಲಿಮರನ್ನೂ ಹಿಂದೂ ಮಾಡುತ್ತೇವೆ ಎಂಬ ಹೇಳಿಕೆ ವಾಪಸ್ ಪಡೆದ ತೇಜಸ್ವಿ ಸೂರ್ಯ


ಉಡುಪಿ: ‘ಈಚೆಗೆ ಉಡುಪಿಯ ಕೃಷ್ಣಮಠದಲ್ಲಿ ನಡೆದ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ನಾನು ಮಾತನಾಡಿದ ಕೆಲವು ವಿಚಾರಗಳು ಅನವಶ್ಯಕ ವಿವಾದಗಳಿಗೆ ಎಡೆಮಾಡಿಕೊಡುತ್ತಿರುವ ಕಾರಣ ಹೇಳಿಕೆಗಳನ್ನು ಹಿಂಪಡೆಯುತ್ತಿದ್ದೇನೆ ಎಂದು ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.

 

ಸೂರ್ಯ ಹೇಳಿದ್ದು ಏನು?

‘ಯಾವುದೋ ಕಾರಣಕ್ಕೆ ಹಿಂದೂ ಧರ್ಮದಿಂದ ಕ್ರಿಶ್ಚಿಯನ್‌, ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡವರನ್ನು ಮರಳಿ ಹಿಂದೂ ಧರ್ಮಕ್ಕೆ ಕರೆತಂದರೆ ಸಾಲದು. ಪಾಕಿಸ್ತಾನದಲ್ಲಿರುವ ಮುಸ್ಲಿಮರನ್ನೂ ಹಿಂದೂಗಳಾಗಿ ಪರಿವರ್ತಿಸಬೇಕಾಗಿರುವುದು ಹಿಂದೂಗಳ ಆದ್ಯ ಕರ್ತವ್ಯವಾಗಬೇಕು’ ಎಂದಿದ್ದರು.

‘ಮನೆಯ ಪಕ್ಕದಲ್ಲಿರುವ, ಮೊಹಲ್ಲಾದಲ್ಲಿರುವವರನ್ನು ಹಿಂದೂ ಧರ್ಮಕ್ಕೆ ಕರೆತರುವುದಲ್ಲ; ಅಸಾಧ್ಯವಾದುದನ್ನು ಸಾಧ್ಯವಾಗಿಸುವ ದೊಡ್ಡ ಕನಸುಗಳನ್ನು ಕಾಣಬೇಕು. ಭ್ರಾಂತಿಯಿಂದ ಹೊರಬಂದು ಹಿಂದೂ ಧರ್ಮದ ಪುನರುತ್ಥಾನ ಮಾಡಬೇಕು. ಈ ಮೂಲಕ ಭಾರತ ಪ್ರಪಂಚಕ್ಕೆ ಜಗದ್ಗುರುವಾಗಬೇಕು’ ಎಂದು ತೇಜಸ್ವಿ ಸೂರ್ಯ ಹೇಳಿದ್ದರು.

‘ಹಿಂದೆ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಒತ್ತಡಗಳಿಗೆ ಮಣಿದು ಹಿಂದೂ ಧರ್ಮ ತ್ಯಜಿಸಿದವರನ್ನೆಲ್ಲ ಮರಳಿ ಹಿಂದೂ ಧರ್ಮಕ್ಕೆ ಕರೆತರಲು ಪ್ರತಿ ದೇವಸ್ಥಾನ ಹಾಗೂ ಮಠಗಳು ವಾರ್ಷಿಕ ಗುರಿ ಹಾಕಿಕೊಳ್ಳಬೇಕು. ಟಿಪ್ಪು ಜಯಂತಿಯಂದೇ ಹಿಂದೂ ಧರ್ಮಕ್ಕೆ ಕರೆತರುವ ಕೆಲಸ ಆರಂಭವಾಗಬೇಕು ಎಂದಿದ್ದರು.

ಇದನ್ನೂ ಓದಿ: ಹಿಂದೂ ಧರ್ಮ ಉಳಿಯಬೇಕಾದರೆ ವೈರಿಗಳ ಅರಿವಿರಲಿ: ಸಂಸದ ತೇಜಸ್ವಿ ಸೂರ್ಯ



Read more from source