
ಗರುಡಾ ಮಾಲ್
ಬೆಂಗಳೂರು: ಕೋವಿಡ್ ನಿಯಮಾವಳಿಗಳನ್ನು ಪಾಲಿಸದ ಗರುಡಾ ಮಾಲ್‌ಗೆ ನೋಟಿಸ್ ಜಾರಿ ಮಾಡಿರುವ ಬಿಬಿಎಂಪಿ ಆರೋಗ್ಯಾಧಿಕಾರಿಗಳು 20 ಸಾವಿರ ರೂ. ದಂಡ ವಿಧಿಸಿದ್ದಾರೆ.
ಕೊರೋನಾ ವೈರಾಣುವಿನ ರೂಪಾಂತರಿ ಓಮಿಕ್ರಾನ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಮಗಳನ್ನು ಬಿಗಿಗೊಳಿಸಿದ್ದು, ಮಾಲ್ ಹಾಗೂ ಸಿನಿಮಾ ಮಂದಿರ ಪ್ರವೇಶಿಸುವ ಸಾರ್ವಜನಿಕರು ಎರಡು ಡೋಸ್ ಲಸಿಕೆ ಪಡೆದಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಬೇಕು.
ಲಸಿಕೆ ಪಡೆಯದವರಿಗೆ ಪ್ರವೇಶ ನೀಡಬಾರದೆಂದು ಸೂಚಿಸಲಾಗಿದೆ. ಆದರೆ, ಅಶೋಕ ನಗರದಲ್ಲಿ ಇರುವ ಗರುಡಾ ಮಾಲ್‌ನಲ್ಲಿ ಕೋವಿಡ್ ಸುರಕ್ಷತ್ ಕ್ರಮದ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿದೆ.
ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಲ್‌ಗೆ 20 ಸಾವಿರ ರೂ. ದಂಡ ಹಾಕಲಾಗಿದೆ. ಕೋವಿಡ್ ನಿಯಮ ಪಾಲನೆ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ನೋಟಿಸ್ ನೀಡಲಾಗಿದೆ.
ಇದನ್ನೂ ಓದಿ: ಹೊಸ ವರ್ಷಾಚರಣೆಗೆ ನಗರದಲ್ಲಿ ಬಿಗಿ ಭದ್ರತೆ: ಎಂಜಿ ರಸ್ತೆಯಲ್ಲಿ ಸಿಸಿಟಿವಿ ಕಣ್ಗಾವಲು
ನಾವು ಕಳೆದ ವಾರ ಗರುಡಾ ಮಾಲ್‌ನಲ್ಲಿ ತಪಾಸಣೆ ನಡೆಸಿದ್ದೇವು, ಆಗ ಅಲ್ಲಿ ಎಲ್ಲಾ ಮಾರ್ಗ ಸೂಚಿಗಳನ್ನು ಅನುಸರಿಸಲಾಗುತ್ತಿತ್ತು. ಆದರೆ ನಿನ್ನೆ (ಶನಿವಾರ), ಮಾಲ್ ಗೆ ಭೇಟಿ ನೀಡಿದ ವೇಳೆ ಸಂದರ್ಶಕರು ಎರಡು ಲಸಿಕೆ ತೆಗೆದುಕೊಂಡಿದ್ದಾರೆಯೇ ಎಂಬ ಬಗ್ಗೆ ಅವರು ಪರಿಶೀಲನೆ ನಡೆಸುತ್ತಿರಲಿಲ್ಲ ಎಂಬುದು ನಮಗೆ ತಿಳಿದು ಬಂತು. ಇದಕ್ಕಿಂತ ಹೆಚ್ಚಾಗಿ, ಮಳಿಗೆಗಳಲ್ಲಿನ ಸಿಬ್ಬಂದಿಗಳು ಮಾಸ್ಕ್ ಧರಿಸಿರಲಿಲ್ಲ ಮತ್ತು ಸಾಮಾಜಿಕ ಅಂತರದ ಮಾರ್ಗಸೂಚಿಗಳನ್ನು ಅನುಸರಿಸಲಿಲ್ಲ ಎಂದು ಬಿಬಿಎಂಪಿ ಮುಖ್ಯ ಆರೋಗ್ಯ ಅಧಿಕಾರಿ ಡಾ. ಬಾಲಸುಂದರ್ ಎ ಎಸ್ ಹೇಳಿದರು.
ಲಸಿಕೆ ಸ್ಥಿತಿಯನ್ನು ಹೇಗೆ ಪರಿಶೀಲಿಸುವುದು ಎಂಬುದರ ಕುರಿತು ಮಾಲ್‌ಗಳಿಗೆ ಪ್ರಾತ್ಯಕ್ಷಿಕೆಯನ್ನು ಬಿಬಿಎಂಪಿಯು ಆಯೋಜಿಸಿದೆ ಎಂದು ಅವರು ಹೇಳಿದರು. “ಕೆಲವು ವಾರಗಳ ಹಿಂದೆ ಆದೇಶವನ್ನು ನೀಡಲಾಗಿತ್ತು, ಮತ್ತು ತಪಾಸಣೆಯು ಸ್ವತಃ ಒಬ್ಬ ವ್ಯಕ್ತಿಗೆ ಕೇವಲ ಒಂದು ನಿಮಿಷವನ್ನು ತೆಗೆದುಕೊಳ್ಳುತ್ತದೆ, ಆದ್ದರಿಂದ ಸಂದರ್ಶಕರು ಲಸಿಕೆ ಹಾಕಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ವಿಫಲವಾಗಿರುವುದರ ಹಿನ್ನೆಲೆಯಲ್ಲಿ ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.