Karnataka news paper

ಮಾದಕ ವಸ್ತುಗಳ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿ: ಯುವ ಜನತೆಗೆ ಸಿಎಂ ಬೊಮ್ಮಾಯಿ ಕರೆ



ಮಾದಕ ವಸ್ತುಗಳ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿ: ಯುವ ಜನತೆಗೆ ಸಿಎಂ ಬೊಮ್ಮಾಯಿ ಕರೆ

ಡಿಸೆಂಬರ್ 26, 2021 ರಂದು ಬೆಂಗಳೂರಿನಲ್ಲಿ ನಡೆದ ಮಾದಕ ದ್ರವ್ಯ ವಿರೋಧಿ ಅಭಿಯಾನದಲ್ಲಿ ಪಾಲ್ಗೊಂಡಿರುವ ವಿದ್ಯಾರ್ಥಿಗಳು.

The New Indian Express

ಬೆಂಗಳೂರು: ಮಾದಕ ವಸ್ತುಗಳ ಪಿಡುಗು ತೊಲಗಿಸಲು ಯುವಕರು ಸರ್ಕಾರದೊಂದಿಗೆ ಕೈಜೋಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಕರೆ ನೀಡಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ವಸ್ತುಗಳ ವಿರುದ್ಧ ಕರ್ನಾಟಕ ಎಂಬ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುವಜನರ ಸಹಕಾರದಿಂದ ಕರ್ನಾಟಕವು ಮಾದಕ ದ್ರವ್ಯಗಳು ಮತ್ತು ಸೈಕೋಟ್ರೋಪಿಕ್ ವಸ್ತುಗಳ ಹಾವಳಿಯಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಹೇಳಿದರು.

ಯುವಜನತೆಗೆ ಮತ್ತೊಂದು ಹೆಸರೇ ಶಕ್ತಿ, ಯುವಕರು ಈ ಶಕ್ತಿಯನ್ನು ಸದುಪಯೋಗಪಡಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಎಲ್ಲಾ ಪ್ರಮುಖ ಸಂಸ್ಥೆಗಳು ಮತ್ತು ಕಾಲೇಜುಗಳ ಸುತ್ತಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಪೊಲೀಸರಿಗೆ ಸೂಚನೆ ನೀಡಿಲಾಗಿದೆ. ಕಾಲೇಜು ಆವರಣ ಮತ್ತು ಹಾಸ್ಟೆಲ್‌ಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಕಾಲೇಜು ಕ್ಯಾಂಪಸ್‌ಗಳಲ್ಲಿ ಮಾದಕ ವಸ್ತು ಮಾರಾಟ ಮಾಡುವವರ ವಿರುದ್ಧ ಮತ್ತು ಮಾದಕ ದ್ರವ್ಯಗಳನ್ನು ಬಳಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ವಶಪಡಿಸಿಕೊಂಡ ಡ್ರಗ್ಸ್ ಪ್ರಮಾಣದಲ್ಲಿ ಕರ್ನಾಟಕ ದೇಶದಲ್ಲೇ ಅಗ್ರಸ್ಥಾನದಲ್ಲಿದೆ. “ನಾವು ಡ್ರಗ್ಸ್ ವಿರುದ್ಧ ನಿರಂತರ ಹೋರಾಟವನ್ನು ನಡೆಸುತ್ತಿದ್ದೇವೆ. ಬೆಂಗಳೂರಿನಲ್ಲಿ ನೆಲೆಸಿರುವ ವಿದೇಶಿ ಮೂಲದ ಕೆಲ ನಿರ್ಲಜ್ಜ ವ್ಯಕ್ತಿಗಳು ಮಾದಕ ವಸ್ತು ದಂಧೆಯಲ್ಲಿ ತೊಡಗಿರುವುದು ಪತ್ತೆಯಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿ ಮೊದಲ ಬಾರಿಗೆ ಡಾರ್ಕ್ ವೆಬ್’ನ್ನು ಬೇಧಿಸಲಾಗಿದೆ. ವಿದೇಶದಿಂದ ಡ್ರಗ್ ಸರಬರಾಜನ್ನು ತಡೆಯಲಾಗುತ್ತಿದೆ ಎಂದು ಹೇಳಿದರು.




    Read more