Karnataka news paper

ನಿಶ್ಚಿತಾರ್ಥ ಖಚಿತಪಡಿಸಿದ ನಟಿ ಅದಿತಿ ಪ್ರಭುದೇವ


ಬೆಂಗಳೂರು: ಚಂದನವನದ ಬೇಡಿಕೆಯ ನಟಿ ಅದಿತಿ ಪ್ರಭುದೇವ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ಬಗ್ಗೆ ಖಚಿತಪಡಿಸಿದ್ದಾರೆ.

ಸೋಮವಾರ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡಿದ್ದವು. ಇನ್‌ಸ್ಟಾಗ್ರಾಂನಲ್ಲಿ ನಿಶ್ಚಿತಾರ್ಥದ ವಿಷಯವನ್ನು ಖಚಿತಪಡಿಸಿದ್ದಾರೆ. 

ಇನ್‌ಸ್ಟಾಗ್ರಾಂನಲ್ಲಿ ದಾವಣಗೆರೆ ಮೂಲದ ಹುಡುಗನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ  ಫೋಟೊವನ್ನು ಹಂಚಿಕೊಂಡಿದ್ದಾರೆ. ಅದರ ಜತೆಯಲ್ಲಿ ‘ಒಂದು ಕನಸಿನಂತೆ ಈ ಕನಸು ನಿಜವಾಗಿದೆ’ ಎಂದು ಬರೆದಿದ್ದಾರೆ. ಹಾಗೆ ಹ್ಯಾಶ್‌ಟ್ಯಾಗ್‌ ಹಾಕಿ ಎಂಗೆಜ್ಡ್‌ ಎಂದು ಬರೆದುಕೊಂಡಿದ್ದಾರೆ. 

ಓದಿ: 

ಅಭಿಮಾನಿಗಳು ಸೇರಿದಂತೆ ಸಿನಿಮಾ, ಕಿರುತೆರೆಯ ಗಣ್ಯರು, ಆಪ್ತರು, ಗೆಳೆಯರು ಶುಭಾಶಯಗಳನ್ನು ಹೇಳುತ್ತಿದ್ದಾರೆ. ಭಾನುವಾರ (ಡಿಸೆಂಬರ್​ 26) ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹುಡುಗ ದಾವಣಗೆರೆ ಮೂಲದವರು ಎನ್ನಲಾಗಿದೆ. 

ಓದಿ: 

ಇತ್ತೀಚೆಗೆ ಅದಿತಿ ನಟನೆಯ ‘ಆನ’ ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಅವರ ಇನ್ನು ಎರಡು ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. 





Read More…Source link