Karnataka news paper

ಫ್ಲಿಪ್‌ಕಾರ್ಟ್ ನಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ ಸಿಗಲಿದೆ ಬಿಗ್‌ ಆಫರ್‌!


ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಇಯರ್‌ ಎಂಡ್‌ ಸೇಲ್‌ ಅನ್ನು ಆಯೋಜಿಸಿದೆ. ಈ ಸೇಲ್‌ನಲ್ಲಿ ವಿವಿಧ ಬ್ರಾಂಡ್‌ಗಳ ಸ್ಮಾರ್ಟ್‌ಫೋನ್‌ಗಳ ಮೇಲೆ ವಿಶೇಷ ಡಿಸ್ಕೌಂಡ್‌ ಘೋಷಿಸಿದೆ. ಅಲ್ಲದೆ ಕಂಪನಿಯು ಎಕ್ಸ್‌ಚೇಂಜ್ ಆಫರ್‌ಗಳು, ನೋ-ಕಾಸ್ಟ್ ಇಎಂಐ, ಫ್ಲಿಪ್‌ಕಾರ್ಟ್ ಸ್ಮಾರ್ಟ್ ಅಪ್‌ಗ್ರೇಡ್ ವಿಶೇಷತೆಗಳನ್ನು ಸಹ ನೀಡುತ್ತಿದೆ. ಇನ್ನು ಈ ಸೇಲ್‌ ಇದೇ ಡಿಸೆಂಬರ್ 30 ರವರೆಗೆ ನಡೆಯಲಿದೆ ಎಂದು ಕಂಪನಿಯು ಪ್ರಕಟಿಸಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್‌ ಇಯರ್‌ ಎಂಡ್‌ ಸೇಲ್‌ನಲ್ಲಿ ನೀವು ಯಾವ್ಯಾವ ಸ್ಮಾರ್ಟ್‌ಫೋನ್‌ ಖರೀದಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಐಫೋನ್‌ 12 ಮಿನಿ

ಐಫೋನ್‌ 12 ಮಿನಿ

ಫ್ಲಿಪ್‌ಕಾರ್ಟ್‌ ಇಯರ್‌ ಎಂಡ್‌ ಸೇಲ್‌ನಲ್ಲಿ ಆಪಲ್‌ ಕಂಪನಿಯ ಐಫೋನ್‌ 12 ಮಿನಿ ವಿಶೇಷ ಡಿಸ್ಕೌಂಟ್‌ ಪಡೆದಿದೆ. ಇದರ ಬೇಸ್ ಮಾಡೆಲ್‌ 64GB ಆಯ್ಕೆಗೆ 41,119 ರೂ.ಗಳಿಗೆ ದೊರೆಯಲಿದೆ. ಇನ್ನು ಐಫೋನ್ 12 ಮಿನಿ 5.4-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ಸೂಪರ್ ರೆಟಿನಾ XRD ಡಿಸ್‌ಪ್ಲೇ ಮಾದರಿಯಲ್ಲಿದೆ. ಇದು A14 ಬಯೋನಿಕ್ ಎಸ್‌ಒಸಿ ಪ್ರೊಸೆಸರ್‌ ಬಲವನ್ನು ಪಡೆದಿದ್ದು, 5G ಸಪೋರ್ಟ್ ಪಡೆದಿದೆ. ಐಫೋನ್ 12 ಮಿನಿ ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸೆನ್ಸಾರ್‌ಗಳನ್ನು ಹೊಂದಿದೆ. ಇದು ನೈಟ್‌ ಮೋಡ್‌ ಆಯ್ಕೆ ಹೊಂದಿದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ನೀಲಿ, ಹಸಿರು, ಕಪ್ಪು, ಬಿಳಿ ಮತ್ತು ಕೆಂಪು ಬಣ್ಣಗಳ ಆಯ್ಕೆಯನ್ನು ಪಡೆದಿದೆ.

ಮೊಟೊರೊಲಾ ಎಡ್ಜ್ 20 ಫ್ಯೂಷನ್

ಮೊಟೊರೊಲಾ ಎಡ್ಜ್ 20 ಫ್ಯೂಷನ್

ಫ್ಲಿಪ್‌ಕಾರ್ಟ್ ಸ್ಮಾರ್ಟ್‌ಫೋನ್ ಇಯರ್ ಎಂಡ್ ಸೇಲ್‌ನಲ್ಲಿ ಮೊಟೊರೊಲಾ ಎಡ್ಜ್ 20 ಫ್ಯೂಷನ್ ಸ್ಮಾರ್ಟ್‌ಫೋನ್‌ 16% ಡಿಸ್ಕೌಂಟ್‌ ಪಡೆದಿದೆ. ಜೊತೆಗೆ ನಿಮ್ಮ ಹಳೆಯ ಫೋನ್ ಅನ್ನು ಎಕ್ಸ್‌ಚೇಂಜ್ ಆಫರ್‌ನ ಅಡಿಯಲ್ಲಿ ವಿನಿಮಯ ಮಾಡಿಕೊಂಡರೆ 15,450ರೂ. ವರೆಗೆ ರಿಯಾಯಿತಿ ಪಡೆಯಬಹುದು. ಇನ್ನು ಈ ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್‌ ಹೆಚ್‌ಡಿ+ ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 800U 5G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಇದೆ, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಟರ್ಬೊಪವರ್ 30 ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

ಒಪ್ಪೋ ರೆನೊ 6 5G

ಒಪ್ಪೋ ರೆನೊ 6 5G

ಫ್ಲಿಪ್‌ಕಾರ್ಟ್‌ ಸ್ಮಾರ್ಟ್‌ಫೋನ್‌ ಇಯರ್‌ ಎಂಡ್‌ ಸೇಲ್‌ನಲ್ಲಿ ಒಪ್ಪೋ ರೆನೊ 6 5G ಸ್ಮಾರ್ಟ್‌ಫೋನ್‌ ಅನ್ನು 29,990ರೂ.ಗೆ ಮಾರಾಟವಾಗುತ್ತಿದೆ. ಈ ಸ್ಮಾರ್ಟ್‌ಫೋನ್‌ 6.43-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಜೊತೆಗೆ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ಸೂಪರ್ VOOC ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ವಿವೊ X70 ಪ್ರೊ

ವಿವೊ X70 ಪ್ರೊ

ವಿವೋ ಕಂಪೆನಿಯ ವಿವೋ X70 ಪ್ರೊ ಫ್ಲಿಪ್‌ಕಾರ್ಟ್‌ ಇಯರ್‌ ಎಂಡ್‌ ಸೇಲ್‌ನಲ್ಲಿ 128GB ಸ್ಟೋರೇಜ್ ಆಯ್ಕೆ 46,990 ರೂ.ಗಳಿಗೆ ಸೇಲ್‌ ಆಗುತ್ತಿದೆ. ಈ ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಬೆಂಬಲವನ್ನು ಪಡೆದುಕೊಂಡಿದೆ. ಈ ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766V ಅಲ್ಟ್ರಾ-ಸೆನ್ಸಿಂಗ್ ಗಿಂಬಲ್ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,450mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ರಿಯಲ್‌ಮಿ GT ಮಾಸ್ಟರ್ ಆವೃತ್ತಿ

ರಿಯಲ್‌ಮಿ GT ಮಾಸ್ಟರ್ ಆವೃತ್ತಿ

ಫ್ಲಿಪ್‌ಕಾರ್ಟ್‌ನಲ್ಲಿ ರಿಯಲ್‌ಮಿ GT ಮಾಸ್ಟರ್ ಆವೃತ್ತಿ ಸ್ಮಾರ್ಟ್‌ಫೋನ್‌ ಇದೀಗ 25,999ರೂ.ಗಳಿಗೆ ಲಭ್ಯವಾಗುತ್ತಿದೆ. ಈ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ 1,000ರೂ.ಗಳ ತನಕ ಇಳಿಕೆಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.43-ಇಂಚಿನ ಫುಲ್‌ ಹೆಚ್‌ಡಿ+ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಒಳಗೊಂಡಿದ್ದು, ಆಂಡ್ರಾಯ್ಡ್‌ 11ರ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್‌ ಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ಸೂಪರ್ ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.



Read more…