Karnataka news paper

ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ ಬಿಜೆಪಿ ಕಾರ್ಯಕಾರಣಿ ಸಭೆ; ಪಾಲಿಕೆ ಆವರಣದಲ್ಲಿ ಕಸ ಚೆಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ!


ಹೈಲೈಟ್ಸ್‌:

  • ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯುತ್ತಿದ್ದರೆ, ಕಾಂಗ್ರೆಸ್ ಪ್ರತಿಭಟನೆಯ ಹಾದಿ ಹಿಡಿದಿದೆ
  • ಟ್ರ್ಯಾಕ್ಟ್‌ರ್‌ನಲ್ಲಿ ಲೋಡ್‌ಗಟ್ಟಲೆ ಕಸ ತುಂಬಿಕೊಂಡು ಬಂದು ಪಾಲಿಕೆ ಎದುರು ಹಾಕಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್
  • ಕಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವಿಟ್ಟು ಕಾಂಗ್ರೆಸ್ ಕಾರ್ಯಕರ್ತರಿಂದ ಆಕ್ರೋಶ

ಹುಬ್ಬಳ್ಳಿ: ಒಂದು ಕಡೆ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯುತ್ತಿದ್ದರೆ, ಇನ್ನೊಂದು ಕಡೆ ಕಾಂಗ್ರೆಸ್ ಪ್ರತಿಭಟನೆಯ ಹಾದಿ ಹಿಡಿದಿದೆ. ವಾಣಿಜ್ಯ ನಗರಿ ಗಾರ್ಬೆಜ್ ಸಿಟಿ ಆಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಮತ್ತಿತರರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಇದು ಬಿಜೆಪಿ ನಾಯಕರುಗಳಿಗೆ ಮುಜುಗರ ಉಂಟು ಮಾಡಿದೆ.

ಹುಬ್ಬಳ್ಳಿ ಮಹಾನಗರ ಪಾಲಿಕೆ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಟ್ರ್ಯಾಕ್ಟ್‌ರ್‌ನಲ್ಲಿ ಲೋಡ್‌ಗಟ್ಟಲೆ ಕಸ ತುಂಬಿಕೊಂಡು ಬಂದು ಪಾಲಿಕೆ ಎದುರು ಹಾಕಿ ವಿನೂತನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಉತ್ತಮ ಕೆಲಸವನ್ನು ಮಾಡುತ್ತಿದೆ; ಅರುಣ್ ಸಿಂಗ್
ಹುಬ್ಬಳ್ಳಿಯನ್ನ ಕಸ ಮುಕ್ತವನ್ನಾಗಿ ಮಾಡಲು ಬಿಜೆಪಿಯವರಿಗೆ ಆಗಿಲ್ಲ. ಕಳೆದ ‌ಒಂದು ವಾರದಿಂದ ಕಸ ವಿಲೇವಾರಿ ಮಾಡಿಲ್ಲ. ನಗರವನ್ನ ಸ್ವಚ್ಛವಾಗಿಡಲು ಬಿಜೆಪಿ ವಿಫಲವಾಗಿದೆ. ಎಲ್ಲಾ ಪೌರ ಕಾರ್ಮಿಕರನ್ನ ಬಿಜೆಪಿಯವರು ತಮ್ಮ ಕಾರ್ಯಕ್ರಮದ ಸ್ವಚ್ಚತಾ ಕಾರ್ಯಕ್ಕೆ ಬಳಿಸಿಕೊಂಡಿದ್ದಾರೆ ಎಂದು ಆರೋಪಿಸಿ ಕಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವಿಟ್ಟು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ; ನಡೆಯುತ್ತಾ ನಾಯಕತ್ವ ಬದಲಾವಣೆ ಚರ್ಚೆ?
ಸ್ಮಾರ್ಟ್ ಸಿಟಿ ಎಂದು ಹೇಳ್ತಿರೋ ಹುಬ್ಬಳ್ಳಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ರಸ್ತೆಗಳು ಗುಂಡಿಗಳಿಂದ ತುಂಬಿ ಹೋಗಿವೆ. ಎಲ್ಲಿ ನೋಡಿದರೂ ಧೂಳು, ಕಸ ವಿಲೇವಾರಿಯೂ ಸಮರ್ಪಕವಾಗಿ ನಡೆಯುತ್ತಿಲ್ಲ . ಕೂಡಲೇ ನಗರದ ಜನತೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ. ಈ ಸಂದರ್ಭ ಪ್ರತಿಭಟನೆ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಮಾತಿನ ಚಕಮಕಿ ನಡೆದಿದೆ.
ಡಿ.28, 29ಕ್ಕೆ ಹುಬ್ಬಳ್ಳಿಯಲ್ಲಿ ನಡೆಯಲಿದೆ ಬಿಜೆಪಿ ರಾಜ್ಯ ಕಾರ‍್ಯಕಾರಣಿ ಸಭೆ; ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭಾಗಿ
ಇಲ್ಲಿನ ಗೋಕುಲ್‌ ರಸ್ತೆ ಖಾಸಗಿ ಹೋಟೆಲ್‌ನಲ್ಲಿ ಡಿ. 28, 29ರಂದು ರಾಜ್ಯ ಬಿಜೆಪಿ ಕಾರ‍್ಯಕಾರಿಣಿ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ.

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಪಕ್ಷದ ಸಾಧನೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಿದ್ಧತೆ ಮತ್ತು ಮತಾಂತರ ವಿರೋಧಿ ಮಸೂದೆಗೆ ಒತ್ತು ನೀಡುವ ವಿಚಾರಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿವೆ.



Read more