Karnataka news paper

ಕೋವಿಡ್ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಸೂಚನೆ: 27 ಜಿಲ್ಲೆಗಳಲ್ಲಿ ತೀವ್ರ ನಿಗಾ


Source : ANI

ನವದೆಹಲಿ: ಮೂರು ರಾಜ್ಯಗಳ ಎಂಟು ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರವು ಶೇ. 10ಕ್ಕಿಂತ ಹೆಚ್ಚಿರುವ ಕಾರಣ ಆತಂಕ ವ್ಯಕ್ತಪಡಿಸಿರುವ ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೋವಿಡ್ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ನಿಗಾವಹಿಸುವಂತೆ ಸೂಚಿಸಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಕಳೆದ ಎರಡು ವಾರದಲ್ಲಿ ಕೇರಳ, ಮಿಜೋರಾಂ, ಅರುಣಾಚಲ ಪ್ರದೇಶ, ಪುದುಚೇರಿ, ಮಣಿಪುರ, ಪಶ್ಚಿಮ ಬಂಗಾಳ ಮತ್ತು ನಾಗಾಲ್ಯಾಂಡ್‍ನ 19 ಜಿಲ್ಲೆಗಳಲ್ಲಿ ಶೇಕಡಾ 5 ರಿಂದ 10 ರಷ್ಟು, ಇನ್ನು ಕಳೆದ ಎರಡು ವಾರದಲ್ಲಿ ಮಿಜೋರಾಂ, ಕೇರಳ ಮತ್ತು ಸಿಕ್ಕಿಂನ ಎಂಟು ಜಿಲ್ಲೆಗಳಲ್ಲಿ ಕೋವಿಡ್ -19 ಪಾಸಿಟಿವಿಟಿ ದರವು ಶೇಕಡಾ 10 ಕ್ಕಿಂತ ಹೆಚ್ಚಿದೆ. ಹಾಗಾಗಿ ಈ 27 ಜಿಲ್ಲೆಗಳ ಮೇಲೆ ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗುತ್ತದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

“ಯಾವುದೇ ಜಿಲ್ಲೆಯಲ್ಲಿ ಪ್ರಕರಣಗಳು ಉಲ್ಬಣಗೊಂಡರೆ ಅಥವಾ ಪಾಸಿಟಿವಿಟಿ ದರಗಳಲ್ಲಿ ಏರಿಕೆ ಕಂಡುಬಂದಲ್ಲಿ, ತೀವ್ರ ಕ್ರಮ ಮತ್ತು ಸ್ಥಳೀಯ ನಿಯಂತ್ರಣವನ್ನು ತಕ್ಷಣವೇ ಪ್ರಾರಂಭಿಸಬೇಕು” ಎಂದು ಭೂಷಣ್ ತಿಳಿಸಿದರು.

 

27 ಜಿಲ್ಲೆಗಳಲ್ಲಿ ತೀವ್ರ ನಿಗಾ
ದೇಶದಲ್ಲಿ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ಇಂತಹ 27 ಜಿಲ್ಲೆಗಳು ಇವೆ ಅವುಗಳನ್ನು “ಅತ್ಯಂತ ನಿಕಟವಾಗಿ ಮೇಲ್ವಿಚಾರಣೆ” ಮಾಡಬೇಕಾಗಿದೆ ಎಂದು ಆರೋಗ್ಯ ಕಾರ್ಯದರ್ಶಿ ಭೂಷಣ್ ಹೇಳಿದರು, 

ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರ ಜೊತೆ ಪಾಸಿಟಿವಿ ದರ 10ಕ್ಕಿಂತ ಹೆಚ್ಚಾಗುತ್ತಿರುವುದು ಕಂಡು ಬಂದಲ್ಲಿ ತತ್‍ಕ್ಷಣವೇ ರಾತ್ರಿ ಕಫ್ರ್ಯೂಗಳು, ಜನರು ಗುಂಪು ಸೇರುವುದನ್ನು ನಿರ್ಬಂಧಿಸುವುದು, ಮನರಂಜನೆ, ಶೈಕ್ಷಣಿಕ, ಸಾಂಸ್ಕøತಿಕ, ಧಾರ್ಮಿಕ, ಹಬ್ಬ-ಸಂಬಂಧಿತ ಸಭೆಗಳ ನಿμÉೀಧ, ಮದುವೆಗಳು ಮತ್ತು ಅಂತ್ಯಕ್ರಿಯೆಗಳು ಅಥವಾ ಅಂತಿಮ ವಿಧಿಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ಮೊಟಕುಗೊಳಿಸುವುದು ಇತ್ಯಾದಿ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ.

ಕೋವಿಡ್ ಪರೀಕ್ಷೆ ಹೆಚ್ಚಳ ಮಾಡುವುದು, ಸಕ್ರಿಯ ಪ್ರಕರಣಗಳು ಮತ್ತು ಸಂಪರ್ಕ ವ್ಯಕ್ತಿಗಳ ಮೇಲೆ ಕಣ್ಗಾವಲು, ತಿವ್ರತರವಾದ ಉಸಿರಾಟದ ಸೋಂಕಿನ ಲಕ್ಷಣಗಳು ಕಂಡು ಬಂದರೆ ಆರ್‍ಟಿಪಿಸಿಆರ್ ಪರೀಕ್ಷೆ ನಡೆಸುವುದು ಇಂತಹ ಕ್ರಮಗಳ ಮೂಲಕ ಕೋವಿಡ್ ಪ್ರಕರಣಗಳ ಮೇಲೆ ಎಚ್ಚರ ವಹಿಸಬೇಕು ಎಂದು ಹೇಳಿದ್ದಾರೆ.
 



Read more