Karnataka news paper

ಕಾಶ್ಮೀರಿಗಳನ್ನು ಬಿಜೆಪಿ ಕೇವಲ “ಮತ ಬ್ಯಾಂಕ್” ಆಗಿ ಬಳಸುತ್ತಿದೆ: ಫರೂಕ್ ಅಬ್ದುಲ್ಲಾ


Source : ANI

ಶ್ರೀನಗರ: ಬಿಜೆಪಿ ಪಕ್ಷವು ಕಾಶ್ಮೀರಿಗರನ್ನು ಕೇವಲ “ಮತ ಬ್ಯಾಂಕ್” ಆಗಿ ಬಳಸುತ್ತಿದೆಯೇ ವಿನಃ ಅವರ ಅನುಕೂಲತೆಗಾಗಿ ಏನು ಮಾಡಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಫರೂಕ್ ಅಬ್ದುಲ್ಲಾ ಅಧ್ಯಕ್ಷರಾಗಿರುವ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಎನ್‍ಸಿ) ನ ಅಲ್ಪಸಂಖ್ಯಾತ ಘಟಕವು ಶನಿವಾರ ಕಾಶ್ಮೀರಿಗರ ಕುರಿತಾಗಿ ಮೂರು ನಿರ್ಣಯಗಳನ್ನು ಮಂಡಿಸಿ ಅಂಗೀಕರಿಸಿದ ನಂತರ ಅವರು ಮಾತನಾಡಿದರು.

‘ಕೆಲವು ಶಕ್ತಿಗಳು ಕಾಶ್ಮೀರಿ ಪಂಡಿತರು ಮತ್ತು ಮುಸ್ಲಿಂ ಸಮುದಾಯವನ್ನು ವಿಭಜಿಸಲು ಪ್ರಯತ್ನಿಸಿದವು. ಪಂಡಿತರನ್ನು ಕಾಶ್ಮೀರ ತೊರೆಯುವಂತೆ ಒತ್ತಾಯಿಸಿದ್ದು ಸ್ವಾರ್ಥಿಗಳೇ ಹೊರತು ಮುಸ್ಲಿಮರಲ್ಲ. ಪಂಡಿತರನ್ನು ಕಣಿವೆಯಿಂದ ಹೊರಹಾಕಿದ ನಂತರ ಕಾಶ್ಮೀರವನ್ನು ತಮ್ಮ ವಶಕ್ಕೆ ಪಡೆದುಕೊಳ್ಳಬಹುದೆಂದು ಅವರು ಭಾವಿಸಿದ್ದರು. ಆದರೆ ಅವರು ಎಂದಿಗೂ ತಮ್ಮ ಕೆಟ್ಟ ಯೋಜನೆಗಳನ್ನು ಸಾಧಿಸಲು ಸಾಧ್ಯವಾಗುವುದಿಲ್ಲ. ಕಾಶ್ಮೀರಿ ಪಂಡಿತರಿಗೆ ಆಶ್ರಯ ನೀಡಿದ್ದಕ್ಕಾಗಿ ನಾನು ಜಮ್ಮುವಿನ ಜನರನ್ನು ಅಭಿನಂದಿಸುತ್ತೇನೆ ಎಂದರು.

“ನಾವೆಲ್ಲರೂ ನಮ್ಮ ಮನಸ್ಸನ್ನು ಸ್ವಚ್ಛಗೊಳಿಸಬೇಕು ಮುಸ್ಲಿಂ ಮತ್ತು ಹಿಂದೂ ಸಮುದಾಯಗಳ ಅಂತರವನ್ನು ಕಡಿಮೆ ಮಾಡಲು ಮತ್ತು ದ್ವೇಷವನ್ನು ಪ್ರೀತಿಯಿಂದ ಬದಲಾಯಿಸಲು ಪ್ರಯತ್ನಿಸಬೇಕು. ನಮ್ಮನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಯಾರಿಗೂ ಅವಕಾಶ ನೀಡಬಾರದು” ಎಂದರು.

ರಾಜಕೀಯ ಪಕ್ಷದ ಅಲ್ಪಸಂಖ್ಯಾತ ಘಟಕವು ಕಾಶ್ಮೀರಿ ಪಂಡಿತರಿಗೆ ರಾಜಕೀಯ ಮೀಸಲಾತಿ, ಕಾಶ್ಮೀರಿ ಹಿಂದೂ ದೇವಾಲಯದ ಸಂರಕ್ಷಣಾ ಮಸೂದೆಯ ಅಂಗೀಕಾರ ಮತ್ತು ಕಾಶ್ಮೀರಿ ಪಂಡಿತರ ಮರಳುವಿಕೆ ಮತ್ತು ಪುನರ್ವಸತಿಗಾಗಿ ಸಮಗ್ರ ಪ್ಯಾಕೇಜ್ ಎಂಬ ಮೂರು ನಿರ್ಣಯಗಳನ್ನು ಅಂಗೀಕರಿಸಿದೆ.



Read more