Karnataka news paper

ಬಹುನಿರೀಕ್ಷಿತ ಶಿಯೋಮಿ 12 ಸರಣಿ ಬಿಡುಗಡೆ! ವಿಶೇಷತೆ ಏನು?


ಶೀಯೋಮಿ

ಹೌದು, ಶೀಯೋಮಿ ಕಂಪೆನಿ ಚೀನಾ ಮಾರುಕಟ್ಟೆಯಲ್ಲಿ ಆನ್‌ಲೈನ್ ಈವೆಂಟ್‌ನಲ್ಲಿ ಶಿಯೋಮಿ 12 ಸರಣಿ ಬಿಡುಗಡೆ ಮಾಡಿದೆ. ಈ ಮೂಲಕ ಹೊಸ ವರ್ಷಕ್ಕೆ ಭರ್ಜರಿಯಾಗಿಯೇ ಎಂಟ್ರಿ ನೀಡಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿವೆ. ಇದರಲ್ಲಿ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಮುಖ್ಯ ಕ್ಯಾಮೆರಾವನ್ನು ಪಡೆದುಕೊಂಡಿವೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ವಿಶೇಷತೆ ಒಳಗೊಂಡಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಶಿಯೋಮಿ 12 ಸ್ಮಾರ್ಟ್‌ಫೋನ್‌

ಶಿಯೋಮಿ 12 ಸ್ಮಾರ್ಟ್‌ಫೋನ್‌

ಶಿಯೋಮಿ 12 ಸ್ಮಾರ್ಟ್‌ಫೋನ್‌ ಕಂಪನಿಯ ಪ್ರಮುಖ ಕಾಂಪ್ಯಾಕ್ಟ್ ಪ್ಲ್ಯಾಗ್‌ಶಿಪ್‌ ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.28 ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್, 419ppi ಪಿಕ್ಸೆಲ್ ಸಾಂದ್ರತೆ ಹಾಗೂ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಆಧಾರಿತ MIUI 13 ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ಟೆಲಿಫೋಟೋ ಸೆನ್ಸಾರ್‌ ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು 50W ವೈರ್‌ಲೆಸ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಇನ್ನು ಈ ಫೋನ್ Dolby Atmos ಮತ್ತು Dolby Vision ಎರಡನ್ನೂ ಬೆಂಬಲಿಸುತ್ತದೆ.

ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌

ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌

ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ 3,200×1,440 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.73 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿರುತ್ತದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 480Hz ಟಚ್ ಸ್ಯಾಪ್ಲಿಂಗ್‌ ರೇಟ್‌ AMOLED LTPO ಡಿಸ್‌ಪ್ಲೇಯೊಂದಿಗೆ ಬರುತ್ತದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 12 ಅನ್ನು ಆಧರಿಸಿ MIUI 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4600 mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಇದು 120W ವೈರ್ಡ್, 50W ವೈರ್‌ಲೆಸ್ ಚಾರ್ಜಿಂಗ್ ಮತ್ತು 10W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಶಿಯೋಮಿ 12 ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಸ್ಟೋರೇಜ್ ಆಯ್ಕೆಗೆ ಯುವಾನ್ 3699 (ಅಂದಾಜು 43,362ರೂ)ಬೆಲೆ ಹೊಂದಿದೆ. ಇದಲ್ಲದೆ 8GB RAM ಮತ್ತು 256GB ಸ್ಟೋರೇಜ್ ರೂಪಾಂತರಕ್ಕಾಗಿ ಯುವಾನ್ 3999 (ಅಂದಾಜು 46,879ರೂ.) ಬೆಲೆ ಹೊಂದಿದೆ.
ಇನ್ನು ಶಿಯೋಮಿ 12 ಪ್ರೊ 8GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕಾಗಿ ಯುವಾನ್ 4699 (ಅಂದಾಜು 55,000ರೂ)ಬೆಲೆ ಹೊಂದಿದೆ. ಇದಲ್ಲದೆ 8GB RAM ಮತ್ತು 256GB ಸ್ಟೋರೇಜ್ ರೂಪಾಂತರಕ್ಕಾಗಿ ಯುವಾನ್ 4999 (ಅಂದಾಜು 58,600ರೂ) ಬೆಲೆ ಪಡೆದುಕೊಂಡಿದೆ. ಇದು ಭಾರತದಲ್ಲಿ ಯಾವಾಗ ಲಭ್ಯವಾಗಲಿದೆ ಅನ್ನೊದು ಇನ್ನು ತಿಳಿದು ಬಂದಿಲ್ಲ.



Read more…