
ಹೌದು, ಮೊಟೊರೊಲಾ ಕಂಪೆನಿ ನೂತನ ಮೊಟೊ E40 ಸ್ಮಾರ್ಟ್‌ಫೋನ್ ಗಟ್ಟಿಮುಟ್ಟಾದ ಹಾಗೂ ಕ್ರಿಯಾತ್ಮಕ ರಚನೆಯನ್ನು ಪಡೆದಿದೆ. ಹಿಂಬದಿಯಲ್ಲಿ ಲೊಗೊ ಜೊತೆಗೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 48 ಎಂಪಿ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 5,000mAh ಬ್ಯಾಟರಿ ಬಾಳಿಕೆ ಪಡೆದಿರುವುದು ಮತ್ತೊಂದು ಹೈಲೈಟ್ ಆಗಿದೆ. ಹಾಗಾದರೇ ಮೊಟೊ E40 ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್‌ಗಳೆನು? ಹಾಗೂ ಫೀಚರ್ಸ್‌ಗಳ ಕಾರ್ಯವೈಖರಿ ಹೇಗೆ? ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತ ವಿನ್ಯಾಸ
ಮೊಟೊ E40 ಸ್ಮಾರ್ಟ್‌ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಮ್ಯಾಕ್ಸ್ ವಿಷನ್ ಹೆಚ್‌ಡಿ + ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ IPS LCD ಡಿಸ್‌ಪ್ಲೇ ಆಗಿದ್ದು, 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ತನ್ನ ವರ್ಗದಲ್ಲಿಯೇ ಉತ್ತಮ ಡಿಸ್‌ಪ್ಲೇ ರೆಸಲ್ಯೂಶ್ ಹೊಂದಿದ್ದು, ಗೇಮಿಂಗ್ ಮತ್ತು ವಿಡಿಯೊ ವೀಕ್ಷಣೆಗೆ ಪೂರಕವಾಗಿದೆ. ಮೊದಲ ನೋಟದಲ್ಲಿಯೇ ಗ್ರಾಹಕರಿಗೆ ಈ ಫೋನ್ ಡಿಸೈನ್ ಹೆಚ್ಚು ಆಕರ್ಷಕ ಅನಿಸಲಿದೆ. ಹಾಗೆಯೇ ಇದು ಈ ಡಿಸ್‌ಪ್ಲೇ 81.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಹಾಗೆಯೇ ಈ ಡಿಸ್‌ಪ್ಲೇ 270ಪಿಪಿಐ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್ ಬಲ ಯಾವುದು?
ಮೊಟೊ E40 ಸ್ಮಾರ್ಟ್‌ಫೋನ್ ಯೂನಿಸೋಕ್ T700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ತನ್ನ ವರ್ಗದಲ್ಲೇ ಇದು ಉತ್ತಮ ಪ್ರೊಸೆಸರ್ ಬಲ ಆಗಿದ್ದು, ಈ ಪ್ರೊಸೆಸರ್ ಸಾಮಾಜಿಕ ಅಪ್ಲಿಕೇಶನ್‌ಗಳು, ವೀಡಿಯೊ ಕರೆಗಳು ಸೇರಿದಂತೆ ಇತರೆ ಮಲ್ಟಿ ಟಾಸ್ಕ್ ಕೆಲಸಗಳನ್ನು ನಿಭಾಯಿಸುತ್ತದೆ. ಹಾಗೆಯೇ ಗೇಮ್ ಆಡಲು ಪೂರಕ ಎನಿಸಲಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು 1TB ವರೆಗೆ ವಿಸ್ತರಿಸಬಹುದಾಗಿದೆ.

ಟ್ರಿಪಲ್ ರಿಯರ್ ಕ್ಯಾಮೆರಾ
ಮೊಟೊ E40 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಪ್ರಾಥಮಿಕ ಸೆನ್ಸಾರ್ ಜೊತೆಗೆ f/1.79 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಜೊತೆಗೆ f/2.4 ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಈ ಫೋನ್ ಬಜೆಟ್ ದರದ ಫೋನ್ ಆಗಿದ್ದು, 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿರುವುದು ಆಕರ್ಷಣಿಯ ಎನಿಸಿಕೊಂಡಿದೆ. ಇನ್ನು ರಿಯರ್ ಕ್ಯಾಮೆರಾಗಳು ಪೋರ್ಟ್ರೇಟ್ ಮೋಡ್, ಪನೋರಮಾ, ಫೇಸ್ ಬ್ಯೂಟಿ, ಎಚ್‌ಡಿಆರ್ ನೈಟ್ ವಿಷನ್, ಮ್ಯಾಕ್ರೋ ವಿಷನ್ ಮತ್ತು ಪ್ರೊ ಮೋಡ್ ಫೀಚರ್ಸ್‌ಗಳನ್ನು ಬೆಂಬಲಿಸುತ್ತವೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ E40 ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11 a/b/g, ಬ್ಲೂಟೂತ್ v5.0, GPS/A-GPS, FM ರೇಡಿಯೋ ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಮತ್ತು ಸಾಮೀಪ್ಯ ಸೆನ್ಸರ್ ಅನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಮೊಟೊರೊಲಾ ಮೊಟೊ E40 ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 9,499.ರೂ ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಾರ್ಬನ್ ಗ್ರೇ ಮತ್ತು ಪಿಂಕ್ ಕ್ಲೇ ಬಣ್ಣಗಳಲ್ಲಿ ಲಭ್ಯವಾಗಲಿದೆ.

ಕೊನೆಯ ಮಾತು
ಮೊಟೊ E40 ಸ್ಮಾರ್ಟ್‌ಫೋನ್ ಬಜೆಟ್ ದರದ ಬೆಲೆ ಹೊಂದಿರುವುದು ಪ್ರಮುಖ ಆಕರ್ಷಣೆ ಆಗಿದೆ. ತನ್ನ ವರ್ಗದಲ್ಲೇ ಹಲವು ಉತ್ತಮ ಫೀಚರ್ಸ್‌ಗಳನ್ನು ಇದು ಒಳಗೊಂಡಿದೆ. ಅವುಗಳು ಕ್ರಮವಾಗಿ ಗಟ್ಟಿಮುಟ್ಟಾದ ವಿನ್ಯಾಸ, 90Hz ಡಿಸ್‌ಪ್ಲೇ, ದೀರ್ಘಾವಧಿಯ ಬ್ಯಾಟರಿ ಬಾಳಿಕೆ ಹಾಗೂ ಉತ್ತಮವಾದ ಸ್ಟಾಕ್ ಆಂಡ್ರಾಯ್ಡ್ ಬಳಕೆದಾರರ ಅನುಭವವನ್ನು ನೀಡುತ್ತದೆ. ಅದಾಗ್ಯೂ ಈ ಫೋನ್ ಕ್ಯಾಮೆರಾ ವೈಲ್ಡ್ ಆಂಗಲ್ ಸೆನ್ಸಾರ್ ಹೊಂದಿಲ್ಲ. ಚಾರ್ಜಿಂಗ್ ವೇಗವು ನಿಧಾನ ಇದೆ. ಈ ಅಂಶಗಳನ್ನು ಹೊರತುಪಡಿಸಿದರೇ, ಮೊಟೊ E40 ಸ್ಮಾರ್ಟ್‌ಫೋನ್ ಬಜೆಟ್ ಬೆಲೆಗೆ ಬೊಂಬಾಟ್ ಫೋನ್ ಎನಿಸಲಿದೆ.

ಮೊಟೊರೊಲಾ ಇತ್ತೀಚಿಗಷ್ಟೆ ನೂತನವಾಗಿ ಮೋಟೋ E30 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಫೋನ್ 720×1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇದು ಮ್ಯಾಕ್ಸ್ ವಿಷನ್ IPS ಡಿಸ್‌ಪ್ಲೇ ಆಗಿದ್ದು, 20:9 ರಚನೆಯ ಅನುಪಾತ ಮತ್ತು 90Hz ರಿಫ್ರೆಶ್ ದರವನ್ನು ಹೊಂದಿದೆ.ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯೂನಿಸೋಕ್ T700 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 Go ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಟ್ರಿಪಲ್ ಕ್ಯಾಮೆರಾ ರಚನೆ ಇದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.