Karnataka news paper

ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಮೋಟೋ ಎಡ್ಜ್‌ X30 ಸ್ಮಾರ್ಟ್‌ಫೋನ್‌!


ಮೋಟೋ ಎಡ್ಜ್‌ X30 ಸ್ಮಾರ್ಟ್‌ಫೋನ್‌

ಹೌದು, ಮೊಟೊರೊಲಾ ಕಂಪೆನಿ 2022ರ ಪ್ರಾರಂಭದಲ್ಲಿ ಮೋಟೋ ಎಡ್ಜ್‌ X30 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಲಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 9Gen 1 ಪ್ರೊಸೆಸರ್‌ ಬರಲಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಈಗಾಗಲೇ ಚೀನಾದಲ್ಲಿ ಬಿಡುಗಡೆಯಾಗಿದ್ದು, ಸಾಕಷ್ಟು ಸಂಚಲನ ಸೃಷ್ಟಿಸಿದೆ. ಈ ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನುಳಿದಂತೆ ಮೋಟೋ ಎಡ್ಜ್‌ X30 ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ಹೇಗಿದೆ?

ಡಿಸ್‌ಪ್ಲೇ ಹೇಗಿದೆ?

ಮೋಟೋ ಎಡ್ಜ್‌ X30 ಸ್ಮಾರ್ಟ್‌ಫೋನ್‌ 2400×1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ OLED ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 144Hz ನ ಹೆಚ್ಚಿನ ರಿಫ್ರೆಶ್ ರೇಟ್‌ ಮತ್ತು 576Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ DCI-P3 ಕಲರ್‌ ಹರವು ಮತ್ತು HDR10+ ಅನ್ನು ಸಹ ಬೆಂಬಲಿಸುತ್ತದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ನು ಸ್ಮಾರ್ಟ್‌ಫೋನ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 8 Gen1 ಪ್ರೊಸೆಸರ್‌ ಅನ್ನು ಹೊಂದಿದೆ. ಇದು 12 OS ನಲ್ಲಿ MyUI 3.0 ಕ್ಲೀನ್ ಸ್ಟಾಕ್ UI ಜೊತೆಗೆ ರನ್ ಆಗುತ್ತದೆ. ಜೊತೆಗೆ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಮೋಟೋ ಎಡ್ಜ್‌ X30 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ ಡ್ಯುಯಲ್ 50MP OV50A40 ಸೆನ್ಸಾರ್‌, ಎರಡನೇ ಕ್ಯಾಮೆರಾ 5MP ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2MP ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 60 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 68W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ. ಈ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ನೊಂದಿಗೆ ಬರುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಮಂಡಳಿಯಲ್ಲಿನ ಸಂವೇದಕಗಳು ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಸಾಮೀಪ್ಯ ಸಂವೇದಕವನ್ನು ಒಳಗೊಂಡಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೋಟೋ ಎಡ್ಜ್‌ X30 ಸ್ಮಾರ್ಟ್‌ಫೋನ್‌ ಅನ್ನು ಚೀನಾದಲ್ಲಿ 8GB/128GB ರೂಪಾಂತರಕ್ಕಾಗಿ RMB 3,199 (ಸುಮಾರು Rs 38,000), 8GB/256GB ಮಾದರಿಗಾಗಿ RMB 3399 (ಅಂದಾಜು ರೂ 40,300) ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್ ಅನ್ನು ನೀಲಿ ಮತ್ತು ಬಿಳಿ ಬಣ್ಣಗಳಲ್ಲಿ ನೀಡಲಾಗುತ್ತದೆ. ಭಾರತದಲ್ಲಿ, ಕಂಪನಿಯು ಜನವರಿ 2022ರ ವೇಳೆಗೆ ಈ ಡಿವೈಸ್‌ ಅನ್ನು ಪ್ರಾರಂಭಿಸುವ ನಿರೀಕ್ಷೆಯಿದೆ.



Read more…