Karnataka news paper

Omicron Variant: ಕರ್ನಾಟಕದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆ!


ಹೈಲೈಟ್ಸ್‌:

  • ಕರ್ನಾಟಕದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆ
  • ರಾಜ್ಯದಲ್ಲಿ ಮೂರನೇ ಒಮಿಕ್ರಾನ್‌ ಸೋಂಕು ದೃಢ
  • ದಕ್ಷಿಣ ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಸೋಂಕು

ಬೆಂಗಳೂರು:ಕರ್ನಾಟಕ ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಮೂರು ಒಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ದಕ್ಷಿಣ ಆಫ್ರಿಕಾದಿಂದ ವಾಪಸಾಗಿರುವ34 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಒಮಿಕ್ರಾನ್ ಸೋಂಕಿತನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಒಮಿಕ್ರಾನ್ ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿ ಐವರು, ದ್ವಿತೀಯ ಸಂಪರ್ಕದಲ್ಲಿ 15 ಜನರನ್ನು ಪತ್ತೆ ಮಾಡಲಾಗಿದೆ. ಎಲ್ಲ ಸಂಪರ್ಕಿತರ ಸ್ಯಾಂಪಲ್ಸ್‌ ಪಡೆದು ಜಿನೋಮಿಕ್ ಸೀಕ್ವೆನ್ಸಿಂಗ್‌ಗೆ ರವಾನಿಸಲಾಗಿದೆ ಎಂದು ಟ್ವೀಟ್ ಮೂಲಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ದಕ್ಷಿಣ ಆಫ್ರಿಕಾದಿಂದ ಡಿಸೆಂಬರ್ 1 ರಂದು ಮಧ್ಯರಾತ್ರಿ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಬೆಂಗಳೂರು ಏರ್ಪೋರ್ಟ್‌ನಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಏರ್ಪೋರ್ಟ್‌ನಲ್ಲಿ ಕೋವಿಡ್ ಟೆಸ್ಟ್ ಮಾಡಿದಾಗ ನೆಗೆಟಿವ್ ಬಂದಿತ್ತು. ನಂತರ ಆ ವ್ಯಕ್ತಿಯನ್ನು ಬಿಬಿಎಂಪಿ ಹೋಮ್ ಐಸೊಲೇಸನ್ ಮಾಡಿತ್ತು. ಡಿಸೆಂಬರ್ 2 ರಂದು ಒಮಿಕ್ರಾನ್ ಲಕ್ಷಣ ಕಾಣಿಸಿದೆ. ಡಿಸೆಂಬರ್ 2 ರಂದು ಮತ್ತೆ ಕೋವಿಡ್ ಟೆಸ್ಟ್ ಮಾಡಿದಾಗ ಕೊರೊನಾ ಪಾಸಿಟಿವ್ ಬಂದಿತ್ತು.

Omicron variant: ಮುಂಬಯಿನಲ್ಲಿ 144 ಸೆಕ್ಷನ್ ಜಾರಿ, ವಿಕೇಂಡ್‌ನಲ್ಲಿ ಕಠಿಣ ನಿರ್ಬಂಧ!

ದಕ್ಷಿಣ ಆಫ್ರಿಕಾದಿಂದ ವ್ಯಕ್ತಿ ಬಂದಿದ್ದ ಕಾರಣ ಪಾಸಿಟಿವ್ ವರದಿ ಬರುತ್ತಿದ್ದಂತೆ ತಕ್ಷಣ ವ್ಯಕ್ತಿಯನ್ನು ಬಿಬಿಎಂಪಿ ಆಸ್ಪತ್ರೆಗೆ ಶಿಫ್ಟ್ ಮಾಡಿ ಡಿಸೆಂಬರ್ 3 ರಂದೆ ಸ್ಯಾಂಪಲ್ಸ್‌ ಪಡೆದು ಜಿನೋಮಿಕ್ ಸೀಕ್ವೆನ್ಸಿಂಗ್‌ಗೆ ಕಳಿಸಲಾಗಿತ್ತು. ಇಂದು ಈ 34 ವರ್ಷದ ವ್ಯಕ್ತಿಯ ಜಿನೋಮಿಕ್ ಸೀಕ್ವೆನ್ಸಿಂಗ್‌ ವರದಿ ಬಂದಿದ್ದು ಒಮಿಕ್ರಾನ್ ದೃಢಪಟ್ಟಿದೆ. ಕರ್ನಾಟಕ, ಪಂಜಾಬ್ ಹಾಗೂ ಆಂಧ್ರಪ್ರದೇಶ ಸೇರಿ ಒಟ್ಟು 3 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ನಿನ್ನೆ (ಶನಿವಾರ) ನವೆಂಬರ್ನಲ್ಲಿ ಭಾರತಕ್ಕೆ ಆಗಮಿಸಿದ ಇಟಲಿಯ 20 ವರ್ಷದ ವ್ಯಕ್ತಿಗೆ ಚಂಡೀಗಢದಲ್ಲಿ ಒಮಿಕ್ರಾನ್ ಪಾಸಿಟಿವ್ ಕಂಡುಬಂದಿದೆ. ಈ ಮೂಲಕ ಇಲ್ಲಿಯವರೆಗೆ ಮಹಾರಾಷ್ಟ್ರದಲ್ಲಿ 17, ರಾಜಸ್ಥಾನದಲ್ಲಿ 9, ಗುಜರಾತ್‌ನಲ್ಲಿ 3, ದೆಹಲಿ ಎರಡು ಪ್ರಕರಣಗಳು ಪತ್ತೆಯಾದಂತಾಗಿದೆ.



Read more