Karnataka news paper

ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ ಸಾಧ್ಯತೆ: ಬಿ.ಸಿ. ನಾಗೇಶ್



ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ ಸಾಧ್ಯತೆ: ಬಿ.ಸಿ. ನಾಗೇಶ್

ಬಿಸಿ ನಾಗೇಶ್

The New Indian Express

ಬೆಂಗಳೂರು: ಪಾಠಗಳು ಇನ್ನೂ ಪೂರ್ಣಗೊಳ್ಳದ ಕಾರಣ ಮಾರ್ಚ್‌ ತಿಂಗಳಿನಲ್ಲಿ ನಡೆಯಬೇಕಿದ್ದ ದ್ವಿತೀಯ ಪಿಯು ಪರೀಕ್ಷೆಗಳು ಏಪ್ರಿಲ್ ಕೊನೆಯ ವಾರಕ್ಕೆ ಮುಂದೂಡಿಕೆಯಾಗುವ ಸಾಧ್ಯತೆಗಳಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಬುಧವಾರ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ 53,700 ಶಿಕ್ಷಕರು, ಸಹಾಯಕ ಹುದ್ದೆಗಳು ಖಾಲಿ ಇವೆ: ಸಚಿವ ಬಿಸಿ ನಾಗೇಶ್

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಏಪ್ರಿಲ್ ನಂತರ ಪರೀಕ್ಷೆಗಳು ವಿಳಂಬವಾಗುವುದಿಲ್ಲ. ಏಕೆಂದರೆ, ಪರೀಕ್ಷೆ ವಿಳಂಬವಾಗಿದ್ದೇ ಆದರೆ, ಅದು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET), ಸಾಮಾನ್ಯ ಪ್ರವೇಶ ಪರೀಕ್ಷೆ ಮತ್ತು ವಿದ್ಯಾರ್ಥಿಗಳ ಇತರ ಪ್ರವೇಶ ಪರೀಕ್ಷೆಗಳ ವೇಳಾಪಟ್ಟಿಗಳ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಪರೀಕ್ಷೆಗಳು ವಿಳಂಬವಾಗುವುದಿಲ್ಲ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಮಾರ್ಚ್‌ನಲ್ಲಿ ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ ಎಂದು ಪಿಯು ಇಲಾಖೆ ಹೇಳಿಕೊಂಡಿತ್ತು. ಆದರೆ ಕೋವಿಡ್ ನಿರ್ಬಂಧಗಳಿಂದಾಗಿ ಪಠ್ಯಕ್ರಮವನ್ನು ಪೂರ್ಣಗೊಳಿಸಿಲ್ಲ ಎಂದು ಉಪನ್ಯಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ; ಶೀಘ್ರದಲ್ಲೇ ಅಧಿಸೂಚನೆ: ಬಿಸಿ ನಾಗೇಶ್

ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಪರೀಕ್ಷೆ ಮುಂದೂಡುವ ಕುರಿತು ಚಿಂತನೆ ನಡೆಸಿದ್ದು, ಈ ಕುರಿತು ಔಪಚಾರಿಕ ಸುತ್ತೋಲೆ ಇನ್ನಷ್ಟೇ ಹೊರಬೀಳಬೇಕಿದೆ.




    Read more