ರಾಜೇಶ್ ಗೌಡ ಅವರನ್ನು ಬಿಡಿಎ ಆಯುಕ್ತ ಹುದ್ದೆಗೆ ನೇಮಕ ಮಾಡಿದ ಆದೇಶ ಹಿಂಪಡೆಯಬೇಕು ಹಾಗೂ ಸೂಕ್ತ ಅರ್ಹತೆಯಿರುವ ಅಧಿಕಾರಿಯನ್ನು ನೇಮಿಸಬೇಕೆಂದು ಕೋರಿ ಅರ್ಜಿದಾರರು ನ.3ರಂದು ಸರಕಾರಕ್ಕೆ ಮನವಿ ಪತ್ರ ನೀಡಿದ್ದಾರೆ. ಅದನ್ನು ಈವರೆಗೂ ಪರಿಗಣಿಸಿಲ್ಲ ಎಂದು ಆಕ್ಷೇಪಿಸಿರುವ ಅರ್ಜಿದಾರರು, ಸೂಕ್ತ ಅರ್ಹತೆ ಹೊಂದಿರದ ಕಾರಣಕ್ಕೆ ಬಿಡಿಎ ಆಯುಕ್ತ ಹುದ್ದೆಗೆ ರಾಜೇಶ್ ಗೌಡ ಅವರನ್ನು ನೇಮಿಸಿ ಸರಕಾರ ಹೊರಡಿಸಿದ ಆದೇಶ ರದ್ದುಪಡಿಸಬೇಕು ಎಂದು ನ್ಯಾಯಾಲಯವನ್ನು ಕೋರಿದರು.
ಬಿಡಿಎ ಆಯುಕ್ತರಾಗಿ ರಾಜೇಶ್ ಗೌಡ ನೇಮಕ ಪ್ರಶ್ನಿಸಿ ಅರ್ಜಿ; ಬಿಡಿಎ, ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು:ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಎಂ.ಬಿ.ರಾಜೇಶ್ ಗೌಡ ನೇಮಕ ಪ್ರಶ್ನಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಬುಧವಾರ ಬಿಡಿಎ ಮತ್ತು ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.