ಹೈಲೈಟ್ಸ್:
- ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ
- ಸರ್ಕಾರದ ದುರಾಡಳಿತದಿಂದ ಜನ ಬೇಸತ್ತಿದ್ದಾರೆ
- ಬಿಜೆಪಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ
ರಾಜ್ಯದಲ್ಲಿ ಜನರ ಪ್ರೀತಿ ಕಾಂಗ್ರೆಸ್ ಪರವಾಗಿದೆ. 1187 ರಲ್ಲಿ 500ಕ್ಕೂ ಹೆಚ್ಚು ಸ್ಥಾನ ಕಾಂಗ್ರೆಸ್ ಗೆದ್ದಿದೆ. ಬಿಜೆಪಿ 434, ಜೆಡಿಎಸ್ 45ರಲ್ಲಿ ಗೆದ್ದಿವೆ. ಸುಮಾರು ನೂರಕ್ಕೂ ಹೆಚ್ಚು ಸ್ಥಾನ ಅತಂತ್ರವಾಗಿವೆ. ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಗಾಳಿ ಬೀಸ್ತಿದೆ ಎಂದರು. ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ಜನರಿದ್ದಾರೆ. ಬೆಲೆ ಏರಿಕೆ, ದುರಾಡಳಿತದ ವಿರುದ್ಧ ಬೇಸತ್ತಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ಅಭಿಪ್ರಾಯ.ಈ ಅಭಿಪ್ರಾಯ ಜನರಿಂದ ವ್ಯಕ್ತವಾಗಿದೆ ಎಂದು ಹೇಳಿದರು.
ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರ ಸಭೆ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗೆದ್ದಿದೆ. ಸಿಎಂ ತವರು ಕ್ಷೇತ್ರದಲ್ಲೂ ಬಿಜೆಪಿಗೆ ಹಿನ್ನಡೆಯಾಗಿದೆ.
ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ : ಎಲ್ಲಿ? ಯಾರಿಗೆ ಒಲಿದಿದೆ ವಿಜಯಲಕ್ಷ್ಮಿ?