Karnataka news paper

ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಆರ್ಭಟಕ್ಕೆ ‘ವೆಲ್ ಡನ್’ ಎಂದ ರಾಹುಲ್!


Online Desk

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗಿಂತ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದಕ್ಕೆ ರಾಜ್ಯ ಕಾಂಗ್ರೆಸ್ ತಂಡವನ್ನು ರಾಹುಲ್ ಗಾಂಧಿ ಅಭಿನಂದಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಆರ್ಭಟ, ಮಂಕಾದ ಬಿಜೆಪಿ, ಎರಡಂಕಿಯಲ್ಲಿ ಜೆಡಿಎಸ್

ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ವೆಲ್ ಡನ್, ಟೀಮ್ ಕಾಂಗ್ರೆಸ್ ಎಂದಿದ್ದಾರೆ.

ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಎಂದಿನಂತೆ ಪ್ರಬಲವಾಗಿ ಮುಂದುವರೆಯುತ್ತೇವೆ. ಧನ್ಯವಾದಗಳು ರಾಹುಲ್ ಗಾಂಧಿ ಜೀ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವೀಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ. 

ಹಣಬಲದಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ರಾಜ್ಯದ ಜನತೆಗೆ ಬಿಜೆಪಿಗೆ ತೋರಿಸಿಕೊಟಿದ್ದಾರೆ. ಈ ಫಲಿತಾಂಶ ಜನ ವಿರೋಧಿ ಮತ್ತು ಭ್ರಷ್ಟ ಬಿಜೆಪಿಗೆ ತಕ್ಕ ಪಾಠವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಹೇಳಿದ್ದಾರೆ.





Read more