
ಹೌದು, ಸ್ಯಾಮ್‌ಸಂಗ್ ಕಂಪನಿ ತನ್ನ ಹೊಸ ಗ್ಯಾಲಕ್ಸಿ A33 5G ಮತ್ತು ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಲು ಸಿದ್ಧತೆ ನಡೆಸಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಫೆಬ್ರವರಿಯಲ್ಲಿ ಬಿಡುಗಡೆ ಆಗಲಿವೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ A33 5G ಬೆಲೆಯು ಸ್ಯಾಮ್‌ಸಂಗ್ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್ ಮಾದರಿಯಲ್ಲಿಯೆ ಇರಲಿದೆ ಎಂದು ಹೇಳಲಾಗಿದೆ. ಇನ್ನುಳಿದಮತೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಹೆಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಒದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A33 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ A33 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದೆ. ಈ ಡಿಸ್‌ಪ್ಲೇ 83.68% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 MT6853V ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ ಎಂದು ಸೂಚಿಸಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A13 5G
ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್ 720×1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ಅಡಾಪ್ಟಿವ್ ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಎರಡನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿರಲಿದೆ ಎನ್ನಲಾಗಿದೆ. ಇದು 15W ನಲ್ಲಿ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಎಂದು ಊಹಿಸಲಾಗಿದೆ.

ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್ ಗ್ಯಾಲಕ್ಸಿ A12 ಫೋನ್‌ನ ಮುಂದುವರೆದ ಆವೃತ್ತಿಯಾಗಿದೆ. ಈ ವರ್ಷ ಭಾರತಕ್ಕೆ ಎಂಟ್ರಿ ನೀಡಿದ್ದ ಜನಪ್ರಿಯ ಫೋನ್‌ಗಳಲ್ಲಿ ಗ್ಯಾಲಕ್ಸಿ A12 ಕೂಡ ಸೇರಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ 720×1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಒಂದು ಯುಐ ಕೋರ್ 2.5 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 4GB RAM + 64GB 4GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.