The New Indian Express
ಬೆಂಗಳೂರು: 20 ಲಕ್ಷ ರೂ. ಲಂಚ ಪಡೆದ ಆರೋಪ ಮೇಲೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎಐ)ದ ಬೆಂಗಳೂರು ಪ್ರಾದೇಶಿಕ ಅಧಿಕಾರಿ ಸೇರಿದಂತೆ ನಾಲ್ವರನ್ನು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಶುಕ್ರವಾರ ಪ್ರಾದೇಶಿಕ ಬಂಧಿಸಿದೆ.
ಬೆಂಗಳೂರು ಪ್ರಾದೇಶಿಕ ಅಧಿಕಾರಿ, ಖಾಸಗಿ ಕಂಪನಿಯ ಜನರಲ್ ಮ್ಯಾನೇಜರ್ ಮತ್ತು ಎಕ್ಸಿಕ್ಯೂಟಿವ್ ಸೇರಿದಂತೆ ನಾಲ್ವರನ್ನು ಭ್ರಷ್ಟಾಚಾರ ತಡೆ ಕಾಯ್ದೆ(ಪಿಸಿಎ), 1988 ರ ಅಡಿಯಲ್ಲಿ ಸಿಬಿಐ ಬಂಧಿಸಿದೆ.
ಸಿಬಿಐ ಈ ಸಂಬಂಧ ಬೆಂಗಳೂರು, ನವದೆಹಲಿ, ಕೊಚ್ಚಿ, ಗುರ್ಗಾಂವ್, ಭೋಪಾಲ್ ಸೇರಿದಂತೆ ಹಲವು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು, ಶೋಧ ನಡೆಸಲಾಗುತ್ತಿದೆ.
ದಾಳಿ ವೇಳೆ 4 ಕೋಟಿಯಷ್ಟು ಸಂಪತ್ತನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಎಲ್ಲಾ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಸಿಬಿಐ ಅಧಿಕೃತ ಪ್ರಕಟಣೆ ತಿಳಿಸಿದೆ.