ಹೈಲೈಟ್ಸ್:
- ಹೊಸ ವರ್ಷದ ಸಂಭ್ರಮದ ಹಿನ್ನೆಲೆ
- ಬಿಎಸ್‌ವೈಯನ್ನು ಭೇಟಿಯಾಗಿ ಶುಭಾಶಯ ಕೋರಿದ ಬಸವರಾಜ ಬೊಮ್ಮಾಯಿ
- ವೈಯಾಲಿಕಾವಲ್ ಬಡಾವಣೆಯಲ್ಲಿರುವ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ
ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ವೈಯಾಲಿಕಾವಲ್ ಬಡಾವಣೆಯಲ್ಲಿರುವ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸಚಿವ ಮುನಿರತ್ನ ಟಿಟಿಡಿ ನಿರ್ದೇಶಕ ಶಶಿಧರ ಉಪಸ್ಥಿತರಿದ್ದರು.
ಕಾಶ್ಮೀರದಲ್ಲಿ ವೈಷ್ಣೋದೇವಿ ದೇಗುಲದಲ್ಲಿ ಭೀಕರ ಕಾಲ್ತುಳಿತ, 12 ಸಾವು, 14 ಮಂದಿಗೆ ಗಾಯ
ಇದಾದ ಬಳಿಕ ಸಿಎಂ ಬೊಮ್ಮಾಯಿ ಅವರು ವಿಧಾನ ಸೌಧದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಹೊಸ ವರ್ಷದ ಶುಭಾಷಯಗಳನ್ನು ಕೋರಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್ ಮತ್ತು ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ಸಿಎಂ, 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ವಿತರಣೆ ವಿಚಾರವಾಗಿ ನಾಡಿದ್ದು ಲಸಿಕೆ ಅಭಿಯಾನ ಪ್ರಾರಂಭ ಆಗ್ತಿದೆ. ನಾವೆಲ್ಲರೂ ಭಾಗವಹಿಸುತ್ತಿದ್ದೇವೆ. ಈ ಅಭಿಯಾನ ಯಶಸ್ವಿಯಾಗಿ ಮಾಡುತ್ತಿದ್ದೇವೆ ಎಂದರು. ಜಿಲ್ಲಾ ಅಧಿಕಾರಿ ಹಾಗೂ ಕೋವಿಡ್ ಜಿಲ್ಲಾ ಉಸ್ತುವಾರಿಗೆ ಸೂಚನೆ ನೀಡಿದ್ದೇನೆ. ಅವರು ಕೂಡ ಆಯಾ ಜಿಲ್ಲೆಯಲ್ಲೇ ಲಸಿಕೆ ಅಭಿಯಾನದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು.