Karnataka news paper

Covid-19 Karnataka Update: ಭಾನುವಾರ 330 ಮಂದಿಗೆ ಕೊರೊನಾ


ಬೆಂಗಳೂರು: ರಾಜ್ಯದಲ್ಲಿ ಭಾನುವಾರ 330 ಮಂದಿಗೆ ಕೋವಿಡ್‌ ಸೋಂಕು ತಗುಲಿದ್ದು, ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 7,328ಕ್ಕೆ ತಲುಪಿದೆ. 304 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಮೂವರಿಗೆ ಕೊರೊನಾ ವೈರಸ್‌ನ ಹೊಸ ರೂಪಾಂತರ ಓಮೈಕ್ರಾನ್‌ ತಗುಲಿದೆ. 

ಭಾನುವಾರ ರಾಜ್ಯದಲ್ಲಿ ಕೋವಿಡ್‌ ಕಾರಣದಿಂದ 4 ಮಂದಿ ಮೃತ ಪಟ್ಟಿದ್ದಾರೆ. ಇದುವರೆಗೆ ಸೋಂಕಿನ ಕಾರಣಕ್ಕೆ 38,261 ಮಂದಿ ಮೃತ ಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಮಾಹಿತಿಯಿಂದ ದೃಢ ಪಟ್ಟಿದೆ.

ಇದುವರೆಗೆ ರಾಜ್ಯದಲ್ಲಿ ಕೋವಿಡ್‌ ಸೋಂಕಿಗೆ ಒಳಗಾದವರ ಸಂಖ್ಯೆ 3 ಲಕ್ಷ ದಾಟಿದೆ. ಈ ಪೈಕಿ ಗುಣಮುಖರಾದವರ ಸಂಖ್ಯೆ 29,54,817. ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 0.27 ಇದೆ. ಸೋಂಕಿನಿಂದ ಮೃತಪಟ್ಟವರ ಶೇಕಡಾವಾರು ಪ್ರಮಾಣ 1.21 ಇದೆ.

ಜಿಲ್ಲೆಗಳ ಪೈಕಿ ಬೆಂಗಳೂರು ನಗರದಲ್ಲಿ ಅತಿಹೆಚ್ಚು 205 ಕೋವಿಡ್‌ ದೃಢ ಪ್ರಕರಣಗಳು ವರದಿಯಾಗಿವೆ. 40 ಪ್ರಕರಣಗಳನ್ನು ಒಳಗೊಂಡ ಕೊಡಗು ಜಿಲ್ಲೆಯನ್ನು ಹೊರತು ಪಡಿಸಿ ಬೇರೆ ಯಾವುದೇ ಜಿಲ್ಲೆಯಲ್ಲಿ 15ಕ್ಕಿಂತ ಹೆಚ್ಚು ಕೋವಿಡ್‌ ದೃಢ ಪ್ರಕರಣಗಳು ವರದಿಯಾಗಿಲ್ಲ. ದಕ್ಷಿಣ ಕನ್ನಡ 15, ಮೈಸೂರು 13, ಶಿವಮೊಗ್ಗ 11, ಬೆಳಗಾವಿ 7 ಪ್ರಕರಣಗಳು ಪತ್ತೆಯಾಗಿವೆ. ಹಾಸನ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ತಲಾ 5 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಬಳ್ಳಾರಿ, ಧಾರವಾಡ, ಕೋಲಾರ ಜಿಲ್ಲೆಗಳಲ್ಲಿ ತಲಾ 3 ಮಂದಿಗೆ ಕೋವಿಡ್‌ ತಗುಲಿದೆ. ಉತ್ತರ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತಲಾ 2 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಬೀದರ್‌, ಹಾವೇರಿ, ಕಲಬುರಗಿ, ಉಡುಪಿ ಮತ್ತು ವಿಜಯಪುರದಲ್ಲಿ ತಲಾ 1 ಕೋವಿಡ್‌ ದೃಢ ಪ್ರಕರಣ ವರದಿಯಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಕೋವಿಡ್‌ ಸಂಖ್ಯೆ ಶೂನ್ಯವಾಗಿದೆ.

ಬೆಂಗಳೂರು ನಗರದಲ್ಲಿ ಮೂವರು ಕೋವಿಡ್‌ ಕಾರಣದಿಂದ ಮೃತರಾಗಿದ್ದಾರೆ. ಬೀದರ್‌ನಲ್ಲಿ ಓಬ್ಬನನ್ನು ಹೊರತು ಪಡಿಸಿ ಬೇರೆ ಯಾವ ಜಿಲ್ಲೆಯಲ್ಲೂ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ.



Read more from source