Karnataka news paper

ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಪ್ರವೇಶ ನೀಡುವ ಬೆಸ್ಟ್‌ ಪ್ರಿಪೇಯ್ಡ್‌ ಪ್ಲಾನ್‌ಗಳು!


ಏರ್‌ಟೆಲ್‌

ಹೌದು, ಏರ್‌ಟೆಲ್‌, ಜಿಯೋ, ವಿ ಟೆಲಿಕಾಂಗಳು ಪರಿಚಯಿಸಿರುವ 56 ದಿನಗಳ ಮಾನ್ಯತೆಯ ಪ್ರಿಪೇಯ್ಡ್‌ ಪ್ಲಾನ್‌ಗಳು ಜನಪ್ರಿಯತೆ ಪಡೆದುಕೊಂಡಿವೆ. ಅನಿಯಮಿತ ಕರೆ ಪ್ರಯೋಜನಗಳ ಜೊತೆಗೆ ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಸ್ಟ್ರೀಮಿಂಗ್‌ ಪ್ರವೇಶವನ್ನು ಕೂಡ ಪಡೆದುಕೊಳ್ಳಬಹುದಾಗಿದೆ.ಇದಲ್ಲದೆ ಫಾಸ್ಟ್ಯಾಗ್‌ ರೀಚಾರ್ಜ್‌ನಲ್ಲಿ 100ರೂ.ಗಳ ತನಕ ಕ್ಯಾಶ್‌ಬ್ಯಾಕ್‌ ಆಫರ್‌ ಕೂಡ ದೊರೆಯಲಿದೆ. ಹಾಗಾದ್ರೆ ಬಜೆಟ್‌ ಸ್ನೇಹಿ ಬೆಲೆಯಲ್ಲಿ ನಿಮಗೆ 56 ದಿನಗಳ ಮಾನ್ಯತೆ ನೀಡುವ ಪ್ರಿಪೇಯ್ಡ್‌ಪ್ಲಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಒದಿರಿ.

ಏರ್‌ಟೆಲ್‌

ಏರ್‌ಟೆಲ್‌

ಏರ್‌ಟೆಲ್ ಟೆಲಿಕಾಂ ಪ್ರಸ್ತುತ ಅಮೆಜಾನ್‌ ಪ್ರೈಮ್ ವಿಡಿಯೋ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆಗಳನ್ನು ನೀಡುವ ಹಲವು ಪ್ರಿಪೇಯ್ಡ್ ಪ್ಲಾನ್‌ಗಳ ನೀಡುತ್ತದೆ. ಇದರಲ್ಲಿ 108ರೂ.ಗಳ ಆಡ್-ಆನ್ ಪ್ಲಾನ್ ಕೂಡ ಒಂದು. ಈ ಪ್ಲಾನ್‌ನಲ್ಲಿ ನೀವು ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆಯನ್ನು 30 ದಿನಗಳವರೆಗೆ ಪಡೆಯಬಹುದಾಗಿದೆ. ಇನ್ನು 599ರೂ. ಬೆಲೆಯ ಪ್ರಿಪೇಯ್ಡ್‌ ಪ್ಲಾನ್‌ ಮತ್ತು 838ರೂ.ಗಳ ಪ್ಲಾನ್‌ಗಳು ನಿಮಗೆ ಒಂದು ವರ್ಷದವರೆಗೆ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆಯನ್ನು ನೀಡುತ್ತವೆ.

ಏರ್‌ಟೆಲ್‌ 479ರೂ. ಪ್ರಿಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್‌ 479ರೂ. ಪ್ರಿಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್‌ ಟೆಲಿಕಾಂನ 479ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿನಿತ್ಯ 1.5 GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ದೊರೆಯಲಿದೆ. ಇದಲ್ಲದೆ ಅಮೆಜಾನ್‌ ಪ್ರೈಮ್‌ ಮೊಬೈಲ್‌ ಎಡಿಷನ್‌ ಒಂದು ತಿಂಗಳ ಅವಧಿಗೆ ಉಚಿತವಾಗಿ ದೊರೆಯಲಿದೆ.

ವಿ ಟೆಲಿಕಾಂನ 601ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ 601ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಓಟಿಟಿಯ ಒಂದು ವರ್ಷದ ಚಂದಾದಾರಿಕೆಯ ಪ್ರಯೋಜನ ಲಭ್ಯ ಮಾಡಿದೆ. ಹಾಗೆಯೇ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ಇದಲ್ಲದೆ ವಿ ಟೆಲಿಕಾಂ 501ರೂ. ಪ್ರಿಪೇಯ್ಡ್‌ ಪ್ಲಾನ್, 701ರೂ.ಪ್ರಿಪೇಯ್ಡ್‌ ಪ್ಲಾನ್‌ ಹಾಗೂ 901ರೂ. ಬೆಲೆಯ ಪ್ರಿಪೇಯ್ಡ್‌ ಪ್ಲಾನ್ ಗಳಲ್ಲಿ ಕೂಡ ಸ್ಟ್ರೀಮಿಂಗ್‌ ಸೇವೆಗಳು ದೊರೆಯಲಿವೆ. ಸೇರಿವೆ. ಈ ಎಲ್ಲಾ ಪ್ಲಾನ್‌ಗಳು ಒಂದು ವರ್ಷದವರೆಗೆ ಡಿಸ್ನಿ+ ಹಾಟ್‌ಸ್ಟಾರ್ ಮೊಬೈಲ್ ಪ್ಲಾನ್ ಚಂದಾದಾರಿಕೆಯೊಂದಿಗೆ ಬರುತ್ತವೆ. ಇದಲ್ಲದೆ ವಿ ಟೆಲಿಕಾಂನ ಪೋಸ್ಟ್‌ಪೇಯ್ಡ್ ಬಳಕೆದಾರರು 499ರೂ.ಬೆಲೆಯ ಪ್ಲಾನ್‌ ಮೂಲಕ ಒಂದು ವರ್ಷದ ಅವಧಿಗೆ ಅಮೆಜಾನ್ ಪ್ರೈಮ್ ಚಂದಾದಾರಿಕೆ ಮತ್ತು Disney + Hotstar ಮೊಬೈಲ್ ಚಂದಾದಾರಿಕೆ ಪಡೆಯಬಹುದಾಗಿದೆ.

ಜಿಯೋ 601ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 601ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋದ 601ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 3GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ 6 GB ಡೇಟಾ ಸಿಗಲಿದ್ದು, ಹಾಗೆಯೇ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 90GB ಡೇಟಾ ಪ್ರಯೋಜನ ದೊರೆಯಲಿದೆ.



Read more…