ಹೈಲೈಟ್ಸ್:
- ಕೆಲವೇ ದಿನಗಳಲ್ಲಿ ಮೇಕೆದಾಟು ಕಾಂಗ್ರೆಸ್ ಹೊಣೆಗೇಡಿತನದ ಸಾಕ್ಷ್ಯ ಬಿಡುಗಡೆ
- ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಮೇಕೆದಾಟು ಕುರಿತು ಹೊಣೆಗೇಡಿತನಕ್ಕೆ ಸಾಕ್ಷ್ಯ ನಮ್ಮಲ್ಲಿದೆ
- ಸಚಿವ ಗೋವಿಂದ ಕಾರಜೋಳ ಸುದ್ದಿಗೋಷ್ಠಿಯಲ್ಲಿ ಹೇಳಿಕೆ
ಮೇಕೆದಾಟು ಡ್ಯಾಂ ವಿವಾದ..! ಕರ್ನಾಟಕದ ವಾದವೇನು..? ತಮಿಳುನಾಡಿನ ವಿರೋಧವೇನು..?
ಇದೆಲ್ಲವೂ ರಾಜ್ಯದ ಹಿತದೃಷ್ಠಿಯಿಂದ ಮತ್ತು ರಾಜ್ಯದ ಜನತೆಗೆ ಸತ್ಯ ಗಮನಕ್ಕೆ ತರುವುದಕ್ಕಾಗಿ ಎಂದು ಸಚಿವರು ವಿವರಿಸಿದರು. ಕಾಂಗ್ರೆಸ್ ಪಕ್ಷದ ನಾಯಕರು ಪಾದಯಾತ್ರೆ ನಡೆಸುತ್ತಿರುವುದು ಮತ್ತು ಗಿಮಿಕ್ ಮಾಡುತ್ತಿರುವುದು ಇದೇ ಮೊದಲಲ್ಲ. ಜನವರಿ 7, 2013 ರಿಂದ ಜನವರಿ 14, 2013ರವರೆಗೆ ಪಾದಯಾತ್ರೆ ಮಾಡಿ ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಎಂದು ರಾಜಕೀಯ ಗಿಮಿಕ್ ಮಾಡಿದ್ದರು ಎಂದು ಟೀಕಿಸಿದರು.
ಅಧಿಕಾರದಲ್ಲಿದ್ದಾಗ ಆಲಸ್ಯತನ ತೋರುವುದು, ಕಡತ ಯಜ್ಞ ಮಾಡದೇ ಕಾಲಹರಣ ಮಾಡುವುದು, ವಿರೋಧಪಕ್ಷದಲ್ಲಿ ಬಂದಾಗ ಅನಗತ್ಯವಾದ ಆಂದೋಲನಗಳನ್ನು ಕೈಗೊಳ್ಳುವುದು ಕಾಂಗ್ರೆಸ್ ನವರ ಜಾಯಮಾನ ಎಂದು ಸಚಿವರು ವ್ಯಂಗ್ಯವಾಡಿದರು. ತಾವು ಅಧಿಕಾರದಲ್ಲಿದ್ದಾಗ ಕಾವೇರಿ ಕಣಿವೆಯ ರೈತರ ಮತ್ತು ಜನಹಿತದ ಕೆಲಸಗಳನ್ನು ವಿಳಂಬದ್ರೋಹದ ಮೂಲಕ ಮುಂದೂಡಿ ಈಗ ಪಾದಯಾತ್ರೆ ಮೂಲಕ ಗಿಮಿಕ್ ಮಾಡುವುದು ಜನರಿಗೆ ತಿಳಿಯುತ್ತದೆ ಎಂದು ಸಚಿವರು ವಿವರಿಸಿದರು.
ಜನವರಿ 9 ರಿಂದ ಕಾಂಗ್ರೆಸ್ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಹಮ್ಮಿಕೊಂಡಿದೆ. ಒಟ್ಟು 11 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ. ಕಾಂಗ್ರೆಸ್ ಈ ಪಾದಯಾತ್ರೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.