Karnataka news paper

Karnataka Covid Update: 1,033 ಹೊಸ ಪ್ರಕರಣ, 5 ಮಂದಿ ಸೋಂಕಿತರು ಸಾವು 


ಬೆಂಗಳೂರು: ರಾಜ್ಯದಲ್ಲಿ ಶನಿವಾರ 1,033 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಐವರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. 

ಈವರೆಗೆ ಸೋಂಕಿತರಾದವರ ಸಂಖ್ಯೆ 30,08,370 ಕ್ಕೆ ಏರಿಕೆಯಾಗಿದೆ. ಆ ಪೈಕಿ 38,340 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. 

ಇದುವರೆಗೆ 29,60,615 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 9,386 ಸಕ್ರಿಯ ಪ್ರಕರಣಗಳಿವೆ. 

ಬೆಂಗಳೂರಿನಲ್ಲಿ ಇಂದು 810 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ 48, ಮೈಸೂರು 29, ಉಡುಪಿ 28, ಮಂಡ್ಯ 23, ಕೊಡಗು 13, ಬೆಳಗಾವಿ ಜಿಲ್ಲೆಯಲ್ಲಿ 10 ಹೊಸ ಪ್ರಕರಣಗಳು ವರದಿಯಾಗಿವೆ. 

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.86 ರಷ್ಟಿದ್ದು, ಮರಣ ಪ್ರಮಾಣ ಶೇ  0.48 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.



Read more from source