Karnataka news paper

ಉಡುಪಿ: ಕೊರಗರ ಮೇಲೆ ದೌರ್ಜನ್ಯ ಪ್ರಕರಣ ಸಿಒಡಿ ತನಿಖೆಗೆ ವರ್ಗಾವಣೆ, ಗಾಯಗೊಂಡವರಿಗೆ ತಲಾ 2 ಲಕ್ಷ ರು. ಪರಿಹಾರ


The New Indian Express

ಉಡುಪಿ: ಬ್ರಹ್ಮಾವರ ತಾಲೂಕಿನ ಕೋಟತಟ್ಟು ಬಾರಿಕೆರೆ ಕೊರಗ ಕಾಲನಿಯ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ಘಟನೆಯನ್ನು ಸಿಒಡಿ ತನಿಖೆಗೆ ಆದೇಶ ನೀಡಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಕೋಟದ ಕೊರಗರ ಕಾಲನಿಗೆ  ಭೇಟಿ ನೀಡಿದ ಗೃಹ ಸಚಿವರು ಸದ್ಯಕ್ಕೆ ಪ್ರಕರಣವನ್ನು ಉಡುಪಿ ಡಿವೈಎಸ್ಪಿ ಸುಧಾಕರ್ ಎಸ್ ನಾಯಕ್ ತನಿಖೆ ನಡೆಸುತ್ತಿದ್ದು, ಪ್ರಕರಣವನ್ನು ಸಿಒಡಿ ತನಿಖೆಗೆ ವರ್ಗಾಯಿಸಿರುವುದಾಗಿ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಲಾಠಿಚಾರ್ಜ್ ನಿಂದ ಗಾಯಗೊಂಡವರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದು, ಅದರಲ್ಲಿ 6 ಕುಟುಂಬಗಳಿಗೆ 50 ಸಾವಿರ ರೂ. ಚೆಕ್ ವಿತರಿಸಿದರು. ಉಳಿದ ಒಂದೂವರೆ ಲಕ್ಷ ಹಣವನ್ನು ಸಮಾಜ ಕಲ್ಯಾಣ ಇಲಾಕೆವತಿಯಿಂದ 2 ಕಂತುಗಳಲ್ಲಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸರ್ಕಾರ ಕ್ರಮ: ಸಚಿವ ಶ್ರೀನಿವಾಸ ಪೂಜಾರಿ

ಅವರ ವಿರುದ್ಧ ದಾಖಲಾದ ಕೇಸ್ ಅನ್ನು ಸರಕಾರದ ಮುಖಾಂತರ ವಾಪಸ್ ಪಡೆಯಲು ಕ್ರಮ ಜರುಗಿಸುವುದಾಗಿ ಅವರು ಭರವಸೆ ನೀಡಿದರು. ಪೊಲೀಸರ ವಿರುದ್ಧದ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ನಂತರ 1 ಲಕ್ಷ ರೂ. ಮತ್ತು  ಹಲ್ಲೆ ಮಾಡಿದ ಆರೋಪದ ಮೇಲೆ ಉಳಿದ 50,000 ರೂ. ಹವನ್ನು ನೀಡಲಾಗುವುದು.



Read more