Karnataka news paper

ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ಗೆ ಕೋವಿಡ್‌ ದೃಢ‌


ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರಿಗೆ ಕೋವಿಡ್ ದೃಢಪಟ್ಟಿದೆ.

ಕೊರೊನಾ ಸೋಂಕಿನ ಅಲ್ಪಸ್ವಲ್ಪ ಲಕ್ಷಣಗಳು ಕಾಣಿಸಿಕೊಂಡ ಕಾರಣ ಶನಿವಾರ ಅವರು ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೋವಿಡ್‌ ಇರುವುದು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ನಾಗೇಶ್‌, ‘ಕೋವಿಡ್ ದೃಢಪಟ್ಟಿರುವುದರಿಂದ ನಾನು ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದೂ ಮನವಿ ಮಾಡಿದ್ದಾರೆ.

 



Read more from source