Karnataka news paper

ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ: ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ


Online Desk

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
    
ದುರ್ಘಟನೆ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಜಮ್ಮು-ಕಾಶ್ಮೀರದ ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತದಲ್ಲಿ ಭಕ್ತರ ಸಾವಿನ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಅಲ್ಲದೆ, ಕಾಲ್ತುಳಿತದಿಂದಾಗಿ ಮಡಿದವರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುತ್ತದೆ. ಗಾಯಾಳುಗಳಿಗೆ ರೂ. 50,000 ನೀಡುವುದಾಗಿ ಪ್ರಕಟಿಸಿದ್ದಾರೆ.



Read more