PTI
ರಾಯ್ ಪುರ: ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿರುವ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಅವರನ್ನು ಛತ್ತೀಸ್ ಗಢದ ರಾಯ್ ಪುರ ಜಿಲ್ಲೆಯ ನ್ಯಾಯಾಲಯವೊಂದು ಶುಕ್ರವಾರ ಜನವರಿ13 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದರಿಂದ ರಾಯ್ ಪುರ ಪೊಲೀಸರು ಶುಕ್ರವಾರ ನ್ಯಾಯಾಲಯದ ಮುಂದೆ ಕಾಳಿಚರಣ್ ಮಹಾರಾಜ್ ಅವರನ್ನು ಹಾಜರುಪಡಿಸಿದರು. ಪೊಲೀಸ್ ಕಸ್ಟಡಿಯಲ್ಲಿದ್ದ ಕಾಳಿಚರಣ್ ಅವರನ್ನು ಪ್ರಶ್ನಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಪೊಲೀಸರು ಶುಕ್ರವಾರ ಕೋರ್ಟ್ ಗೆ ಹೇಳಿದ್ದಾರೆ.
ಗುರುವಾರ ಬೆಳಗ್ಗೆ ರಾಯ್ ಪುರ ಪೊಲೀಸರು ಕಾಳಿಚರಣ್ ಅವರನ್ನು ಬಂಧಿಸಿದ ನಂತರ ಎರಡು ದಿನಗಳ ಪೊಲೀಸ್ ಕಸ್ಟಡಿಗೆ ನ್ಯಾಯಾಲಯ ಒಪ್ಪಿಸಿತ್ತು.
ಶನಿವಾರ ಮತ್ತೆ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕಾಗಿತ್ತು. ಆದರೆ, ಪೊಲೀಸರ ವಿಚಾರಣೆ ಮುಗಿದಿದ್ದರಿಂದ ಅವರನ್ನು ಜೆಎಂಎಫ್ ಸಿ ನ್ಯಾಯಾಧೀಶ ಚೇತನ್ ಠಾಕೂರ್ ಮುಂದೆ ಶುಕ್ರವಾರ ಹಾಜರುಪಡಿಸಲಾಯಿತು, ಅವರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು ಎಂದು ಜಿಲ್ಲಾ ಪ್ರಾಸಿಕ್ಯೂಷನ್ ಅಧಿಕಾರಿ ಹಿನಾ ಯಾಸ್ಮಿನ್ ಖಾನ್ ತಿಳಿಸಿದ್ದಾರೆ.