Online Desk
ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಿಂದ ಭೂಮಾಪಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ಹೆಸರು: ಭೂಮಾಪಕರು (ಲ್ಯಾಂಡ್ ಸರ್ವೇಯರ್)
ಒ್ಟು ಹುದ್ದೆಗಳು: 3000
ವಿದ್ಯಾರ್ಹತೆ:
ಪಿಯುಸಿ ಸೈನ್ಸ್ ನಲ್ಲಿ ಗಣಿತ ವಿಷಯದಲ್ಲಿ 60% ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅಥವಾ
ಬಿಇ (ಸಿವಿಲ್)/ ಬಿಟೆಕ್ (ಸಿವಿಲ್)/ ಸಿವಿಲ್ ಇಂಜಿನಿಯರಿಂಗ್ ಡಿಪ್ಲೋಮಾದಲ್ಲಿ ಉತ್ತೀರ್ಣ ಅಥವಾ
ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ “ಲ್ಯಾಂಡ್ ಅಂಡ್ ಸಿಟಿ ಸರ್ವೆ’ಯಲ್ಲಿ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣ,
ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೇ ಟ್ರೇಡ್ ನಲ್ಲಿ ಉತ್ತೀರ್ಣರಾಗಿರಬೇಕು.
ರಾಜ್ಯ ಸರ್ಕಾರದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಅಥವಾ ಸರ್ವೇ ಆಫ್ ಇಂಡಿಯಾ ಅಥವಾ ಸರ್ಕಾರಿ ವಲಯಕ್ಕೆ ಒಳಪಟ್ಟ ಸಂಸ್ಥೆಗಳಲ್ಲಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕನಿಷ್ಠ 10 ವರ್ಷಗಳ ಭೂಮಾಪನ ಸೇವೆ ಸಲ್ಲಿಸಿ ನಿವೃತ್ತರಾದವರು ಸಹ ಪರವಾನಗಿ ಪಡೆಯಲು ಅರ್ಹರಾಗಿರುತ್ತಾರೆ.
ವಯೋಮಾನ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 65 ವರ್ಷ ಮೀರಿರಬಾರದು.
ಆಯ್ಕೆ ವಿಧಾನ
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆಯುವ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಯಾವುದೇ ಸಂದರ್ಶನ ಇರುವುದಿಲ್ಲ.
ಅರ್ಜಿ ಸಲ್ಲಿಕೆಯ ವಿಧಾನ:
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ
( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು
ಅರ್ಜಿ ಶುಲ್ಕ: ಅಭ್ಯರ್ಥಿಗಳು ರೂ. 1000 ಶುಲ್ಕ ಪಾವತಿಸಬೇಕು.
ಶುಲ್ಕ ಪಾವತಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿ ಸಲ್ಲಿಸಲು, ಆನ್‌ಲೈನ್ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಜನವರಿ 21, 2022
ಅರ್ಜಿ ಸಲ್ಲಿಕೆಗೆ ಇಲ್ಲಿ ಕ್ಲಿಕ್ ಮಾಡಿ
https://landrecords.karnataka.gov.in/service201/
ಹೆಚ್ಚಿನ ಮಾಹಿತಿಗಾಗಿ
https://drive.google.com/file/d/1S3ptsc3HMPfxnzGtRFdxY-wO4r8zx2Gu/view