Karnataka news paper

ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಪುನೀತ್ ಭಾವಚಿತ್ರ; ಸಂಭಾವನೆ ಇಲ್ಲದೇ ಜಾಹಿರಾತು ಮಾಡಿದ್ದ ‘ಅಪ್ಪು’ಗೆ ಕೆಎಂಎಫ್ ಗೌರವ


The New Indian Express

ಬೆಂಗಳೂರು: ಕನ್ನಡ ಚಿತ್ರರಂಗದ ರಾಜರತ್ನ ಹಾಗೂ ಅಭಿಮಾನಿಗಳ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರವನ್ನು ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಬಳಕೆ ಮಾಡುವ ಮೂಲಕ ಕೆಎಂಎಫ್ ಅಭಿಮಾನಿಗಳ ಮನ ಗೆದ್ದಿದೆ.

ಹೌದು.. ನಗು ಮುಖದ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ನಿಧನರಾಗಿ ಎರಡು ತಿಂಗಳು ಕಳೆದಿವೆ. ಆದರೆ ಅಭಿಮಾನಿಗಳು ಮಾತ್ರ ಅವರ ಅಗಲಿಕೆಯ ನೋವಿನಿಂದ ಇನ್ನೂ ಹೊರಬಂದಿಲ್ಲ. ಪ್ರತಿನಿತ್ಯ ಒಂದಿಲ್ಲೊಂದು ಕಡೆ ನಿರಂತರವಾಗಿ ಪುನೀತ್ ಸ್ಮರಣೆ ನಡೆಯುತ್ತಲೇ ಇದೆ. ಹೀಗಿರುವಾಗಲೇ ಕರ್ನಾಟಕ ಹಾಲು ಮಹಾ ಒಕ್ಕೂಟ (ಕೆಎಂಎಫ್-Karnataka Milk Federation) ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರವನ್ನು ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಮುದ್ರಿಸುವ ಮೂಲಕ ಅವರಿಗೆ ಅಪರೂಪದ ಗೌರವ ಸಲ್ಲಿಕೆ ಮಾಡಿದೆ.





Read more