ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಹೊಸದಾಗಿ 10 ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ಡಿ. ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸಚಿವರು ಸಾಮಾಜಿಕ ಮಾಧ್ಯಮಗಳಲ್ಲಿ ಸೋಮವಾರ ಪೋಸ್ಟ್ ಮಾಡಿದ್ದಾರೆ.
‘ಜನವರಿ 2 ರಂದು ಕರ್ನಾಟಕದಲ್ಲಿ ಹತ್ತು ಹೊಸ ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಸೋಂಕಿತರ ಒಟ್ಟು ಸಂಖ್ಯೆ 76ಕ್ಕೆ ತಲುಪಿದೆ,’ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ 8 ಪ್ರಕರಣಗಳು ದೃಢವಾಗಿವೆ. ಇವರಲ್ಲಿ ಐವರು ವಿದೇಶಿ ಪ್ರವಾಸ ಕೈಗೊಂಡಿದ್ದ ಹಿನ್ನೆಲೆ ಹೊಂದಿದ್ದಾರೆ.
ಧಾರವಾಡದಲ್ಲಿ ಎರಡು ಪ್ರಕರಣಗಳು ಖಚಿತವಾಗಿವೆ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ರಾಜ್ಯದಲ್ಲಿ ಭಾನುವಾರ ಒಟ್ಟು 1187 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು. ಇನ್ನೊಂದೆಡೆ ಬೆಂಗಳೂರಿನಲ್ಲಿ ಕೋವಿಡ್ ಕಾರಣದಿಂದ ಆಸ್ಪತ್ರೆಗೆ ಸೇರುವವರ ಸಂಖ್ಯೆ ನಿಧಾನವಾಗಿ ಏರುತ್ತಿರುವುದಾಗಿ ವರದಿಯಾಗಿದೆ.