Karnataka news paper

ಓಮಿಕ್ರಾನ್ ಆತಂಕ: ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ; ಬಸವರಾಜ ಬೊಮ್ಮಾಯಿ


ಹೈಲೈಟ್ಸ್‌:

  • ರಾಜ್ಯದಲ್ಲಿ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆ
  • ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ
  • ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗುರುವಾರದ ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೋವಿಡ್‌ ಮತ್ತು ಓಮಿಕ್ರಾನ್ ಎರಡನ್ನೂ ಗಮನಿಸುತ್ತಿದ್ದೇವೆ. ದೇಶದ ಹಲವು ಕಡೆಗಳಲ್ಲಿ ಹಾಗೂ ಅಕ್ಕ ಪಕ್ಕದ ರಾಜ್ಯದಲ್ಲೂ ಓಮಿಕ್ರಾನ್ ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ತಜ್ಞರ ಜೊತೆ ಚರ್ಚೆ ಅಗತ್ಯ ಇದೆ. ಮಂಗಳವಾರ ಸಾಯಂಕಾಲ ತಜ್ಞರ ಜೊತೆ ಚರ್ಚೆ ನಡೆಸಲಾಗುವುದು ಎಂದರು.

ಕೈಗೊಳ್ಳಬೇಕಾಗಿರುವ ನಿರ್ಬಂಧಗಳ ಹಿನ್ನೆಲೆಯಲ್ಲಿ ಗುರುವಾರ ಕ್ಯಾಬಿನೆಟ್‌ ಸಭೆಯಲ್ಲಿ ಒಟ್ಟಾರೆ ರಾಜ್ಯದ ಸ್ಥಿತಿ ಗತಿಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಅಷ್ಟೇ ಅಲ್ಲದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.

ಬೆಂಗಳೂರಿನಲ್ಲಿ ಹೆಚ್ಚುತ್ತಲೇ ಇದೆ ಕೋವಿಡ್‌..! ರಾಜ್ಯದ ಶೇ. 76ರಷ್ಟು ಸೋಂಕಿತರು ರಾಜಧಾನಿಯಲ್ಲೇ ಪತ್ತೆ..!

ಎರಡು ಅಲೆಗಳನ್ನು ನಿಭಾಯಿಸಿದ ಅನುಭವ ನಮಗೆ ಇದೆ. ಈ ಹಿನ್ನೆಲೆಯಲ್ಲಿ ಜನಜೀವನಕ್ಕೆ ತೊಂದರೆ ಆಗದಂತೆ ಕೋವಿಡ್‌ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಸೂಚನೆಗಳನ್ನು ಕೊಡಿ ಎಂದು ತಜ್ಞರಿಗೆ ಹೇಳಿದ್ದೇವೆ ಎಂದು ತಿಳಿಸಿದರು.

ಈ ನಡುವೆ ಮಕ್ಕಳಿಗೆ ಲಸಿಕೆ ಕಾರ್ಯಕ್ರಮ ಪ್ರಾರಂಭ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಇಂದಿನಿಂದ ಈ ಅಭಿಯಾನ ಆರಂಭ ಮಾಡಲಾಗುತ್ತಿದೆ. ವ್ಯಾಪಕವಾದ ಅಭಿಯಾನ ಮಾಡುತ್ತಿದ್ದೇವೆ. ಎಲ್ಲರೂ ಇದಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡರು. ಕೋವಿಡ್‌ ಹಿನ್ನೆಲೆಯಲ್ಲಿ ಜನರು ಸ್ವಯಂ ನಿಯಂತ್ರಣ ಹಾಕಿಕೊಳ್ಳಬೇಕು ಮಾಸ್ಕ್, ಸಾಮಾಜಿಕ ಅಂತರ ಹಾಗೂ ಆರೋಗ್ಯ ಸುರಕ್ಷತೆಯ ಕಡೆಗೆ ಗಮನ ಕೊಡಬೇಕು ಎಂದರು.

ಇನ್ನು ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆಯ ಬಗ್ಗೆ ಮಾತನಾಡಿ, ಮೇಕೆದಾಟು ವಿಚಾರವಾಗಿ ಏನೇನು ಮಾಡುತ್ತಾರೆ ಎಂಬುವುದನ್ನು ನಾನು ಗಮನಿಸುತ್ತೇವೆ. ಕೋವಿಡ್‌ ಹಿನ್ನೆಲೆಯಲ್ಲಿ ಸಾರ್ವತ್ರಿಕವಾದ ಯಾವ ರೀತಿ ನಡವಳಿಕೆ ಇರಬೇಕು . ಇದು ಎಲ್ಲರಿಗೂ ಅನ್ವಯ ಆಗುತ್ತಿದೆ. ನಾಳೆ ಅದರ ಬಗ್ಗೆ ಸಂಪೂರ್ಣ ಚರ್ಚೆ ಆಗಲಿದೆ ಎಂದು ತಿಳಿಸಿದರು.



Read more