Karnataka news paper

ಬೆಳಗಾವಿ: ‘ಸುವರ್ಣ’ ಅಧಿವೇಶನ, ಹಬ್ಬದ ವಾತಾವರಣ


ಬೆಳಗಾವಿ: ಸುವರ್ಣ ವಿಧಾನ ಸೌಧದಲ್ಲಿ ಸೋಮವಾರದಿಂದ ನಡೆಯುವ ವಿಧಾನ ಮಂಡಲಗಳ ಅಧಿವೇಶನದ ಸಿದ್ಧತೆ ಬಹುತೇಕ ಪೂರ್ಣಗೊಂಡಿದೆ.

ಸುವರ್ಣ ವಿಧಾನಸೌಧ, ನಗರದ ರಾಣಿ ಚನ್ನಮ್ಮ ವೃತ್ತ ಸೇರಿದಂತೆ ಪ್ರಮುಖ ವೃತ್ತಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದೆ. ಸಚಿವರು, ಶಾಸಕರು, ಅಧಿಕಾರಿಗಳು ತಂಡೋಪತಂಡವಾಗಿ ಬೆಳಗಾವಿಗೆ ಆಗಮಿಸುತ್ತಿದ್ದು ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಬೆಳಗ್ಗೆ 9 ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನದವರೆಗೂ ಅವರು ಕಲಾಪದಲ್ಲಿ ಪಾಲ್ಗೊಳ್ಳುವರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭಾನುವಾರ ರಾತ್ರಿ ಬೆಳಗಾವಿಗೆ ಆಗಮಿಸಿದ್ದಾರೆ.

ಅಧಿವೇಶನಕ್ಕೆ ಬಂದ ಸಚಿವರು ಗ್ರಾಮ ವಾಸ್ತವ್ಯ ಮಾಡ್ಲಿ, ಸಮಸ್ಯೆ ಏನ್ ಅದಾವ ಅವ್ ಚರ್ಚೆ ಆಗಬೇಕ್ರಿ: ಇದು ಬೆಳಗಾವಿ

ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಸೋಮವಾರ ಬೆಳಗ್ಗೆ ಆಗಮಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರವೇ ಬೆಳಗಾವಿಗೆ ಆಗಮಿಸಿದ್ದಾರೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಮತ್ತಿತರು ಬೆಳಗಾವಿ ವಿಮಾನ ನಿಲ್ದಾಣದಲ್ಲಿಅವರನ್ನು ಸ್ವಾಗತಿಸಿದರು.

ಖಾನಾಪುರ ಅಭಿವೃದ್ಧಿಗೆ ಒತ್ತಾಯಿಸಿ ಶಾಸಕಿ ಅಂಜಲಿ ನಿಂಬಾಳ್ಕರ್‌ ಖಾನಾಪುರದಿಂದ ಸುವರ್ಣ ವಿಧಾನಸೌಧದವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿಸಿದ್ದರಾಮಯ್ಯ ಕೂಡ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

ಎಲ್ಲ ಶಾಸಕರು ಒಂದಾಗಿ ಜಿಲ್ಲೆಗೆ ಸಂಬಂಧಿಸಿದ ವಿಷಯ ಚರ್ಚಿಸುತ್ತೇವೆ

ಬೆಳಗಾವಿ ಜಿಲ್ಲೆಗೆ ಸಂಬಂಧಪಟ್ಟ ವಿಷಯಗಳಿದ್ದರೆ ಅಧಿವೇಶನದಲ್ಲಿಎಲ್ಲಶಾಸಕರು ಕೂಡಿ ಚರ್ಚಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದರು.

ಬೆಳಗಾವಿ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘‘ಅಧಿವೇಶನದಲ್ಲಿ ಎಲ್ಲ ಶಾಸಕರೂ ತಮ್ಮ ತಮ್ಮ ಕ್ಷೇತ್ರಗಳ ಬಗ್ಗೆ ಧ್ವನಿ ಎತ್ತುವುದು ಸಹಜ. ಅದೇ ರೀತಿ ಬೆಳಗಾವಿ ಜಿಲ್ಲೆಯ ವಿಷಯಗಳ ಕುರಿತು ನಾವು ಚರ್ಚಿಸುತ್ತೇವೆ. ಖಾನಾಪುರ ತಾಲೂಕಿನ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಶಾಸಕಿ ಅಂಜಲಿ ನಿಂಬಾಳ್ಕರ್‌ ಅವರು ಪಾದಯಾತ್ರೆ ನಡೆಸಿದ್ದಾರೆ’’ ಎಂದು ಹೇಳಿದರು.

ಮಳೆಗೆ ಕೊಳೆತ ದ್ರಾಕ್ಷಿ: ಬೆಳಗಾವಿ ದ್ರಾಕ್ಷಿ ಬೆಳೆಗಾರರ ನೆರವಿಗೆ ನಿಲ್ಲಬೇಕಿದೆ ಸರಕಾರ

‘‘ಪಟ್ಟಣ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಎರಡು ದಿನಗಳಿಂದ ಸಭೆ ನಡೆಸುತ್ತಿದ್ದೇವೆ. ನಿನ್ನೆ ಚಿಕ್ಕೋಡಿ, ಇಂದು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸಭೆ ನಡೆಸಿದ್ದೇವೆ. ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಸೋಮವಾರ ಸಂಜೆಯೊಳಗೆ ಬಿ ಫಾರ್ಮ್‌ ನೀಡುತ್ತೇವೆ’’ ಎಂದು ಸತೀಶ್‌ ಜಾರಕಿಹೊಳಿ ಹೇಳಿದರು.



Read more