Karnataka news paper

ಕಾಂಗ್ರೆಸ್ ನಾಯಕರು ಗೂಂಡಾಗಳಂತೆ ವರ್ತಿಸಿದ್ದು ಅಕ್ಷಮ್ಯ! ಅಶ್ವತ್ಥ ನಾರಾಯಣ


ಹೈಲೈಟ್ಸ್‌:

  • ಕಾಂಗ್ರೆಸ್ ನಾಯಕರು ಗೂಂಡಾಗಳಂತೆ ವರ್ತಿಸಿದ್ದು ಅಕ್ಷಮ್ಯ!
  • ನಾಡ ಗೀತೆ ಹಾಡುವಾಗ ಗಲಾಟೆ ಮಾಡುವುದು ಸರಿಯೇ
  • ಕಾಂಗ್ರೆಸ್ ವಿರುದ್ಧ ಅಶ್ವತ್ಥ ನಾರಾಯಣ ಕಿಡಿ

ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಗೂಂಡಾಗಳಂತೆ ವರ್ತಿಸಿದ್ದು ಅಕ್ಷಮ್ಯ ಎಂದು ಅಶ್ವತ್ಥ ನಾರಾಯಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಮುಖ್ಯಮಂತ್ರಿಗಳು ಆಗಮಿಸಿದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಮುಖಂಡರು ಶಿಷ್ಟಾಚಾರ ಮರೆತು ಗೂಂಡಾಗಳಂತೆ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಮ್ಮ ರಾಮನಗರದಲ್ಲಿ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯ ನೋಡಿ ಸಹಿಸಲಾಗದಕಾಂಗ್ರೆಸ್ ನಾಯಕರು, ಬೆಂಬಲಿಗರು ಮುಖ್ಯಮಂತ್ರಿಗಳು ಆಗಮಿಸಿದ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಮರೆತು ಗೂಂಡಾಗಳಂತೆ ವರ್ತಿಸಿದ್ದು ಅಕ್ಷಮ್ಯ.

ನಾಡ ಗೀತೆ ಹಾಡುವಾಗ ಗಲಾಟೆ ಮಾಡುವುದು ಮತ್ತು ನಾಡ ಪ್ರಭುಗಳ ಪ್ರತಿಮೆ ಅನಾವರಣ ಮಾಡುವಾಗ ದುರ್ವರ್ತನೆ ತೋರುವುದು ಸರಿಯೇ? ಎಂದು ಪ್ರಶ್ನಿಸಿದ್ದಾರೆ. ರಾಜ್ಯಕ್ಕೆ 2 ಮುಖ್ಯಮಂತ್ರಿಗಳನ್ನು ಕೊಟ್ಟ ನಮ್ಮ ರಾಮನಗರ ಅಭಿವೃದ್ಧಿ ವಿಚಾರವಾಗಿ ಹೆಸರು ಗಳಿಸಬೇಕೇ ಹೊರತು ಗೂಂಡಾಗಿರಿಯಿಂದಾಗಿ ಅಲ್ಲ.

ಇಂತಹ ಅನಾಗರಿಕ ವರ್ತನೆ ತೋರುವುದು ರಾಜ್ಯದಲ್ಲಿ ಕೇವಲ 1 ಪಕ್ಷದಿಂದ ಮಾತ್ರ ಸಾಧ್ಯ. ನಿಮ್ಮ ಹೋರಾಟ ಅಭಿವೃದ್ಧಿ ವಿಚಾರವಾಗಿರಲಿ, ಅಧಿಕಾರದ ವಿಚಾರವಾಗಿ ಅಲ್ಲ ಎಂದು ಹೇಳಿದ್ದಾರೆ.

ವೇದಿಕೆ ಮೇಲೆ ಡಿಕೆ ಸುರೇಶ್ ಹಾಗೂ ಅಶ್ವತ್ಥನಾರಾಯಣ ನಡುವೆ ಜಟಾಪಟಿ!

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ, ತೋಳ್ಬಲ, ಅಕ್ರಮ ಸಂಪತ್ತಿನ ಬಲದಿಂದ ಮೆರೆಯುತ್ತಿರುವ ಕನಕಾಸುರರು ಕರ್ನಾಟಕದ ಅಧಿಕಾರ ಹಿಡಿದು ಶಾಂತಿ ಕದಡುವ ಯತ್ನ ನಡೆಸುತ್ತಿದ್ದಾರೆ. ಇವರು ಅಧಿಕಾರಕ್ಕೆ ಬಂದರೆ ಕಂಡ ಕಂಡ ಖಾಲಿ ಜಾಗಕ್ಕೆ ಬೇಲಿ ಹಾಕುವುದರಲ್ಲಿ ಯಾವುದೇ ಅನುಮಾನವಿಲ್ಲ. ರಾಜ್ಯದ ಜನರು ಇಂತವರ ಕೈಗೆ ಎಂದಿಗೂ ಅಧಿಕಾರ ನೀಡಲಾರರು ಎಂದಿದೆ.

ರಾಮನಗರ ಜಿಲ್ಲೆಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ವೇದಿಕೆಯಲ್ಲೇ ಸಂಸದ ಡಿಕೆ ಸುರೇಶ್ ಹಾಗೂ ಸಚಿವ ಆಶ್ವತ್ಥ ನಾರಾಯಣ ನಡುವೆ ಜಟಾಪಟಿ ನಡೆದಿತ್ತು. ಸಚಿವರು ಪ್ರತಿಭಟನಾಕಾರರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿ ನೀಡಿದ ಹೇಳಿಕೆಗೆ ವೇದಿಕೆಯಲ್ಲೇ ಸುರೇಶ್ ಗರಂ ಆದರು. ಈ ವೇಳೆ ಎಂಎಲ್‌ಸಿ ರವಿ ಅವರು ಮಾತನಾಡಲು ಮುಂದಾದ ಸಂದರ್ಭದಲ್ಲಿ ಅಶ್ವತ್ಥ ನಾರಾಯಣ ಬಿಡದಿದ್ದ ಕಾರಣಕ್ಕಾಗಿ ಆಕ್ರೋಶಗೊಂಡು ವೇದಿಕೆಯಲ್ಲಿದ್ದ ಮೈಕ್‌ ಕಿತ್ತು ಬಿಸಾಡಿದ ಘಟನೆಯೂ ನಡೆದಿತ್ತು.





Read more