Online Desk
ಸ್ಯಾಂಡಲ್‌ವುಡ್ ನಟಿ ಅದಿತಿ ಪ್ರಭುದೇವ, ಕೆಲ ದಿನಗಳ ಹಿಂದೆ ನಿಶ್ಚಿತಾರ್ಥವಾಗಿರುವ ವಿಚಾರವನ್ನು ರಿವೀಲ್ ಮಾಡಿದ್ದರು. ಅವರನ್ನು ಮದುವೆಯಾಗುತ್ತಿರುವ ಹುಡುಗ ಯಾರು ಎಂಬ ಕುತೂಹಲ ಎಲ್ಲರಿಗೂ ಇದ್ದೇ ಇರುತ್ತದೆ. ಈಗ ಅದಿತಿ ಪ್ರಭುದೇವ ಮದುವೆಯಾಗುತ್ತಿರುವ ಹುಡುಗ ಯಾರು ಎನ್ನುವ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ.
ಅದಿತಿ ಪ್ರಭುದೇವ ಅವರ ಭಾವಿ ಪತಿ ಹೆಸರು ಯಶಸ್, ಇವರು ಕಾಫಿ ಎಸ್ಟೇಟ್‌ನ ಮಾಲೀಕ ಹಾಗೂ ಬ್ಯುಸಿನೆಸ್‌ಮ್ಯಾನ್ ಆಗಿದ್ದಾರೆ. ಇದೇ ಡಿ.26ರಂದು ಅದಿತಿ ಪ್ರಭುದೇವ ಯಶಸ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ‘ಈ ಕನಸು ನಿಜವಾಗಿದೆ’: ನಿಶ್ಚಿತಾರ್ಥ ಖಚಿತಪಡಿಸಿದ ನಟಿ ಅದಿತಿ ಪ್ರಭುದೇವ
ನಾನು ನಿಶ್ಚಿತಾರ್ಥ ಮಾಡಿಕೊಂಡಿದ್ದು ಎಲ್ಲರಿಗೂ ಆಶ್ಚರ್ಯವಾಗಿದೆ. ಆದರೆ ನಿಶ್ಚಿತಾರ್ಥ ಸಡನ್ ನಿರ್ಧಾರವಾಗಿದೆ. ನನ್ನ ಪೋಷಕರು ನನ್ನನ್ನು ಮದುವೆಯಾಗು ಎಂದು ಒತ್ತಾಯ ಮಾಡುತ್ತಿದ್ದರು. ವರನಿಗಾಗಿ ಹುಡುಕಾಟ ಮಾಡಲು ಪ್ರಾರಂಭಿಸಿದ್ದರು. ಅವರು ತೋರಿಸಿರುವ ಹುಡುಗ ಯಶಸ್ ನನಗೂ ಇಷ್ಟವಾದರು. ನಂತರ ಹಾಸನದಲ್ಲಿ ನಿಶ್ಚಿತಾರ್ಥ ಮಾಡಿಕೊಂಡೆವು ಎಂದು ಸಂತೋಷದಿಂದ ಹೇಳಿಕೊಂಡಿದ್ದಾರೆ.
ಅದಿತಿ ಪ್ರಭುದೇವ ತಮ್ಮ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಆ ಮೂಲಕ ಎಲ್ಲರಿಗೂ ಹೊಸ ವರ್ಷದ ಶುಭಕೋರಿದ್ದಾರೆ. ಆ ಫೋಟೋ ಕೂಡ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗುತ್ತಿವೆ. ಹೊಸ ಜೀವನಕ್ಕೆ ಕಾಲಿಡಲು ಸಜ್ಜಾಗಿರುವ ಈ ಜೋಡಿಗೆ ಎಲ್ಲರೂ ವಿಶ್ ಮಾಡುತ್ತಿದ್ದಾರೆ.