Karnataka news paper

ಈ ತಿಂಗಳಲ್ಲಿ ನೀವು ಖರೀದಿಸಬಹುದಾದ 40000ರೂ. ಒಳಗಿನ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!


ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳು ಖರೀದಿಗೆ ಲಭ್ಯವಿದೆ. ಸದ್ಯ ಹೊಸ ವರ್ಷದ ಈ ಸಂದರ್ಭದಲ್ಲಿ 40,000ರೂ. ಒಳಗಿನ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವವರಿಗೆ ಹಲವು ಉತ್ತಮ ಆಯ್ಕೆಗಳನ್ನು ಕಾಣಬಹುದಾಗಿದೆ. 40,000ರೂ.ಗಳ ಬೆಲೆಯಲ್ಲಿ ಶೀಯೋಮಿ, ಒಪ್ಪೋ, ಒನ್‌ಪ್ಲಸ್‌ ಕಂಪೆನಿಯ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದಾಗಿದೆ. ಹಾಗಾದ್ರೆ ಭಾರತದಲ್ಲಿ ನೀವು 2022ರಲ್ಲಿ 40,000ರೂ.ಒಳಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

iQOO 7 ಲೆಜೆಂಡ್

iQOO 7 ಲೆಜೆಂಡ್

iQOO 7 ಲೆಜೆಂಡ್ ಸ್ಮಾರ್ಟ್‌ಫೋನ್‌ ಅನ್ನು ನೀವು 39,990ರೂ.ಗಳಿಗೆ ಖರೀದಿಸಬಹುದಾಗಿದೆ. ಹೊಸ ವರ್ಷದ ಈ ಸಮಯದಲ್ಲಿ ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಲ್ಲಿ ಇದು ಕೂಡ ಒಂದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.62 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೇಶ್‌ ರೇಟ್‌ ಹೊಂದಿದ್ದು, 1300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಒನ್‌ಪ್ಲಸ್‌ 9R

ಒನ್‌ಪ್ಲಸ್‌ 9R

ಒನ್‌ಪ್ಲಸ್‌ 9R ಸ್ಮಾರ್ಟ್‌ಫೋನ್‌ ಪ್ರಸ್ತುತ 39,990ರೂ.ಗಳಿಗೆ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.55-ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸುತ್ತದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಆಪರೇಟಿಂಗ್‌ ಸಿಸ್ಟಮ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್‌ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಒಳಗೊಂಡಿದೆ. ಜೊತೆಗೆ ಈ ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಮಿ 11X ಪ್ರೊ

ಮಿ 11X ಪ್ರೊ

ಮಿ 11X ಪ್ರೊ ಸ್ಮಾರ್ಟ್‌ಫೋನ್‌ ಹೊಸ ವರ್ಷದ ಪ್ರಯುಕ್ತ ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ ಪ್ರಸ್ತುತ 36,999ರೂ.ಗೆ ಲಭ್ಯವಿದೆ. ಇದು 6.67-ಇಂಚಿನ ಫುಲ್‌ ಹೆಚ್‌ಡಿ+ ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 33W ವೇಗದ ಚಾರ್ಜಿಂಗ್‌ಗೆ ಬೆಂಬಲದೊಂದಿಗೆ 4520 mAh ಬ್ಯಾಟರಿಯನ್ನು ಒಳಗೊಂಡಿದೆ.

ಒಪ್ಪೋ ರೆನೊ 6 ಪ್ರೊ

ಒಪ್ಪೋ ರೆನೊ 6 ಪ್ರೊ

ಒಪ್ಪೋ ರೆನೋ 6 ಪ್ರೊ 5G ಸ್ಮಾರ್ಟ್‌ಫೋನ್‌ 6.55-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಕಲರ್ ಓಎಸ್ 11.3 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಸಂಗ್ರಹದೊಂದಿಗೆ ಜೋಡಿಸಲ್ಪಟ್ಟಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಸದ್ಯ ಈ ಸ್ಮಾರ್ಟ್‌ಫೋನ್‌ 39,990ರೂ.ಗಳಿಗೆ ಲಭ್ಯವಾಗಲಿದೆ.



Read more…