
ಹೌದು, ಟೆಲಿಕಾಂ ವಲಯದಲ್ಲಿ ಟೆಲಿಕಾಂ ಕಂಪೆನಿಗಳು ತಮ್ಮ ಪ್ರಿಪೇಯ್ಡ್‌ಪ್ಲಾನ್‌ಗಳ ಬೆಲೆಯನ್ನು ಹೆಚ್ಚಳ ಮಾಡಿವೆ. ಇನ್ನು ಈ ಪ್ಲಾನ್‌ಗಳಲ್ಲಿ ದೀರ್ಘಾವಧಿ ಹಾಗೂ ಅಲ್ಪಾವಧಿ ಪ್ಲಾನ್‌ಗಳು ಕೂಡ ಸೇರಿವೆ. ಪ್ರಿಪೇಯ್ಡ್ ಪ್ಲಾನ್‌ಗಳ ಬೆಲೆ ಬದಲಾವಣೆಯ ನಂತರ ನೀವು ಆಯ್ಕೆ ಮಾಡುವ ಪ್ಲಾನ್‌ಗಳು ಬದಲಾಗಲಿವೆ. ಹಾಗಾದ್ರೆ ನೀವು 500 ರೂ. ಕ್ಕಿಂತ ಕಡಿಮೆ ಬೆಲೆಯಲ್ಲಿ 56 ದಿನಗಳ ವ್ಯಾಲಿಡಿಟಿ ನೀಡುವ ಪ್ಲಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಏರ್‌ಟೆಲ್ ಟೆಲಿಕಾಂ
ಏರ್‌ಟೆಲ್ ಟೆಲಿಕಾಂನ 479ರೂ. ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಜೊತೆಗೆ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಕೂಡ ಲಭ್ಯವಾಗಲಿದೆ.

ಜಿಯೋ ಟೆಲಿಕಾಂ
ಜಿಯೋದ 479ರೂ. ಪ್ರೀಪೇಯ್ಡ್ ಪ್ಲಾನ್ ಒಟ್ಟು 56 ದಿನಗಳ ಮಾನ್ಯತೆಯನ್ನು ಪಡೆದಿದೆ. ಈ ಪ್ಲಾನ್‌ನಲ್ಲಿ ದೈನಂದಿನ 1.5GB ಡೇಟಾ, ಅನಿಯಮಿತ ಕರ, ಪ್ರಯೋಜನ ಸಿಗಲಿದೆ. ಜೊತೆಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ. ಇದಲ್ಲದೆ ದಿನಕ್ಕೆ 100 SMS, JioTV, JioCinema, JioSecurity ಮತ್ತು JioCloud ನಂತಹ ಎಲ್ಲಾ Jio ಅಪ್ಲಿಕೇಶನ್‌ಗಳಿಗೆ ಪ್ರವೇಶವನ್ನು ನೀಡಲಿದೆ.

ವೊಡಾಫೋನ್-ಐಡಿಯಾ ಟೆಲಿಕಾಂ
ವಿ ಟೆಲಿಕಾಂ 479ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರತಿದಿನ 1.5GB ಡೇಟಾ ಪ್ರಯೋಜನ ನೀಡಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನಿನಲ್ಲಿ ಬಳಕೆದಾರರು ಹೆಚ್ಚುವರಿ 5GB ಡೇಟಾವನ್ನು ಪಡೆಯಬಹುದು.

ವಾರ್ಷಿಕ ಪ್ಲಾನ್‌ಗಳು
ಇದಲ್ಲದೆ ಈ ಮೂರು ಟೆಲಿಕಾಂಗಳ ದೀರ್ಘಾವಧಿ ಪ್ಲಾನ್‌ಗಳನ್ನು ಕೂಡ ಪರಿಚಯಿಸಿವೆ. ಇವುಗಳಲ್ಲಿ ವಾರ್ಷಿಕ ಪ್ಲಾನ್‌ಗಳು ಕೂಡ ಸೇರಿವೆ. ಹಾಗಾದ್ರೆ ಈ ಮೂರು ಟೆಲಿಕಾಂಗಳು ಪರಿಚಯಿಸಿರುವ ವಾರ್ಷಿಕ ಪ್ಲಾನ್‌ಗಳ ವಿವರವನ್ನು ಈ ಕೆಳಗಿನ ಹಂತಗಳಲ್ಲಿ ತಿಳಿಯಿರಿ. ಇದರಲ್ಲಿ ಜಿಯೋದ 3119ರೂ. ಪ್ರಿಪೇಯ್ಡ್ ಪ್ಲಾನ್ ವಾರ್ಷಿಕ ಯೋಜನೆಯಾಗಿದ್ದು, 365 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಪ್ಲಾನ್‌ನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್‌ಗಳಿಗೆ ಅನಿಯಮಿತ ಫ್ರೀ ವಾಯಿಸ್ ಕಾಲ್ ಪ್ರಯೋಜನ ದೊರೆಯಲಿದೆ. ಪ್ರತಿದಿನ 100 SMS ಮತ್ತು Jio ಅಪ್ಲಿಕೇಶನ್‌ಗಳಿಗೆ ಪ್ರವೇಶವನ್ನು ನೀಡುತ್ತದೆ.

ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್ 1799ರೂ. ಪ್ರಿಪೇಯ್ಡ್ ಪ್ಲಾನ್
ಏರ್‌ಟೆಲ್ ಟೆಲಿಕಾಂನ ಈ ಪ್ಲಾನ್ ದೈನಂದಿನ 24GB ಡೇಟಾ ಪ್ರಯೋಜನವನ್ನು ಹೊಂದಿದೆ. ಇದು ಅನಿಯಮಿತ ಕರೆ ಪ್ರಯೋಜನ ಮತ್ತು ಪ್ರತಿದಿನ 100 SMS ಪ್ರಯೋಜನ ನೀಡಲಿದೆ. ಪ್ರೈಮ್ ವೀಡಿಯೊ ಮೊಬೈಲ್ ಆವೃತ್ತಿ, ಅಪೊಲೊ 24/7 ಗೆ ಪ್ರವೇಶವನ್ನು ನೀಡುತ್ತವೆ. ಉಚಿತ ಆನ್‌ಲೈನ್ ಕೋರ್ಸ್‌ಗಳು, ಫಾಸ್ಟ್ಯಾಗ್‌ನಲ್ಲಿ ಕ್ಯಾಶ್‌ಬ್ಯಾಕ್, ಉಚಿತ ಹೆಲೋಟ್ಯೂನ್ಸ್, ವಿಂಕ್‌ಮ್ಯೂಸಿಕ್ ಯೋಜನೆಗಳು ಹಾಗೂ ಅಮೆಜಾನ್ ಪ್ರೈಮ್ ವೀಡಿಯೊ ಮೊಬೈಲ್ ಆವೃತ್ತಿಗೆ ಪ್ರವೇಶವನ್ನು ನೀಡಲಿವೆ.
ಏರ್‌ಟೆಲ್ 2999ರೂ ಪ್ರಿಪೇಯ್ಡ್ ಪ್ಲಾನ್
ಏರ್‌ಟೆಲ್ ಈ ಪ್ಲಾನ್ ದೈನಂದಿನ 2GB ಡೇಟಾವನ್ನು ನೀಡಲಿದೆ. ಈ ಯೋಜನೆ ಅನಿಯಮಿತ ಕರೆ ಪ್ರಯೋಜನ ನೀಡಲಿದೆ. ಜೊತೆಗೆ ಪ್ರಧಾನ ವೀಡಿಯೊ ಮೊಬೈಲ್ ಆವೃತ್ತಿ, ಅಪೊಲೊ 24 | 7 ಪ್ರವೇಶ ನೀಡಲಿದೆ. ಉಚಿತ ಆನ್‌ಲೈನ್ ಕೋರ್ಸ್‌ಗಳು, ಫಾಸ್ಟ್ಯಾಗ್‌ನಲ್ಲಿ ಕ್ಯಾಶ್‌ಬ್ಯಾಕ್, ಉಚಿತ ಹೆಲೋಟ್ಯೂನ್ಸ್, ವಿಂಕ್‌ಮ್ಯೂಸಿಕ್. ಯೋಜನೆಗಳು ಅಮೆಜಾನ್ ಪ್ರೈಮ್ ವೀಡಿಯೊ ಮೊಬೈಲ್ ಆವೃತ್ತಿಗೆ ಪ್ರವೇಶದೊಂದಿಗೆ ಬರುತ್ತವೆ.

ವಿ ಟೆಲಿಕಾಂನ 2899ರೂ. ಪ್ರಿಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.
ವಿ ಟೆಲಿಕಾಂ 1799ರೂ.ಪ್ರಿಪೇಯ್ಡ್ ಪ್ಲಾನ್
ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಒಟ್ಟು 24GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೂ ಒಟ್ಟು 3600 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಲಭ್ಯವಾಗುತ್ತದೆ. ಇನ್ನು ಹೆಚ್ಚುವರಿಯಾಗಿ ವಿ ಟೆಲಿಕಾಂ ಆಪ್ ಸೇವೆ ಲಭ್ಯ. ಹೆಚ್ಚಿನ ಡೇಟಾ ಅಗತ್ಯ ಇರದ ಆದರೆ ವಾರ್ಷಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಯೋಜನೆ ಸೂಕ್ತ ಎನಿಸಲಿದೆ.