Online Desk
ಜೊಹಾನ್ಸ್‌ಬರ್ಗ್: ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದ್ದು ಇದರ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ ಎದುರಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 202 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಬ್ಯಾಟಿಂಗ್ ಆರಂಭಿಸಿದ್ದ ದಕ್ಷಿಣ ಆಫ್ರಿಕಾ ಮೊದಲ ದಿನದಾಟದಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 35 ರನ್ ಬಾರಿಸಿದೆ.
Not good #INDvSA #Siraj pic.twitter.com/ilYZAhd8Oj
— Benaam Baadshah (@BenaamBaadshah4) January 3, 2022
ದಕ್ಷಿಣ ಆಫ್ರಿಕಾ ಇನಿಂಗ್ಸ್ ನಲ್ಲಿ ತಮ್ಮ ನಾಲ್ಕನೇ ಓವರ್ ನ ಕೊನೆಯ ಎಸೆತದಲ್ಲಿ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅವರ ಕಾಲಿನಲ್ಲಿ ನೋವು ಕಾಣಿಸಿಕೊಂಡಿತು. ಈ ವೇಳೆ ತಂಡದ ಫಿಸಿಯೋ ಮೈದಾನಕ್ಕೆ ಆಗಮಿಸಿ ಸಿರಾಜ್ ರನ್ನು ಡ್ರೆಸ್ಸಿಂಗ್ ರೂಂಗೆ ಕರೆದುಕೊಂಡು ಹೋದರು.