Online Desk
ಬೆಂಗಳೂರು: ಕಾಂಗ್ರೆಸ್ ಸಂಸ್ಕೃತಿಯನ್ನು ರಾಜ್ಯದ ಜನರಿಗೆ ಪರಿಚಯಿಸಿದ ಕಾಂಗ್ರೆಸ್ ಸಂಸದ ಡಿ. ಕೆ. ಸುರೇಶ್ ರವರಿಗೆ ಧನ್ಯವಾದ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಹೇಳಿದ್ದಾರೆ.
ಈ ಸಂಬಂಧ ಸಿ. ಟಿ. ರವಿ ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ. ಇಂದಿನ ಯುವಜನತೆ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಸಂಸ್ಕೃತಿ ಅಂದರೆ ಭ್ರಷ್ಟಾಚಾರ, ಹೊಣೆಗೇಡಿತನ ಅಂದುಕೊಂಡಿದ್ದರು, ರೌಡಿಸಂ ಕೂಡಾ ಅದರ ಅವಿಭಾಜ್ಯ ಅಂಗ ಅನ್ನುವುದು ಈಗ ಜಗಜ್ಜಾಹೀರಾಗಿದೆ.
ಮುಜುಗರವಿಲ್ಲದೆ ಈ “ರಿಪಬ್ಲಿಕ್ ಆಫ್ ರೌಡಿಸಂ” ಅನ್ನು ಸಮರ್ಥಿಸಿಕ್ಕೊಳ್ಳುವ ವ್ಯಕ್ತಿಗಳು ಕೂಡಾ ಕಾಂಗ್ರೆಸ್ ಕುಸಂಸ್ಕೃತಿಯ ಪಾಲುದಾರರು. ನಮ್ಮ ರಕ್ತವೇ ಬೇರೆ ಅನ್ನುವ ಕೆಪಿಸಿಸಿ ಅಧ್ಯಕ್ಷರೇ, ನಿಮ್ಮ ರಕ್ತದ ಮಾದರಿ ಪರೀಕ್ಷೆಗೆ ಸಮಯ ವ್ಯಯ ಮಾಡಬೇಡಿ! ನಿಮ್ಮ ರಕ್ತದ ಗುಣ ನಿನ್ನೆ ನಿಮ್ಮ ಸಹೋದರ ಸಾರ್ವಜನಿಕವಾಗಿ ತೋರಿಸಿದ್ದಾರೆ. ನಿನ್ನೆಯೇ ಅದರ ಪರೀಕ್ಷೆ ಮತ್ತು ಫಲಿತಾಂಶ ರಾಜ್ಯದ ಜನತೆಗೆ ಸಿಕ್ಕಿದೆ.
ಇದನ್ನೂ ಓದಿ: ಹಿಂದೂ ದೇವಾಲಯಗಳಿಗೆ ಸ್ವಾತಂತ್ರ್ಯ, ಮತಾಂತರ ನಿಷೇಧ ಕಾಯ್ದೆ: ಬಿಜೆಪಿ-ಕಾಂಗ್ರೆಸ್ ನಡುವೆ ಮುಂದುವರೆದ ವಾಕ್ಸಮರ
ಕಾಂಗ್ರೆಸ್ ಸಂಸ್ಕೃತಿಯನ್ನು ರಾಜ್ಯದ ಜನರಿಗೆ ಪರಿಚಯಿಸಿದ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ರವರಿಗೆ ಧನ್ಯವಾದ. ಸಾರ್ವಜನಿಕವಾಗಿ ತೋಳೇರಿಸಿ ಸಚಿವರ ಕಡೆ ನುಗ್ಗುವ ನಿಮ್ಮ ರಾಜಕೀಯ ದಾರ್ಷ್ಟ್ಯ ಪ್ರಜಾಪ್ರಭುತ್ವಕ್ಕೆ ಸೂಕ್ತವೇ? ಸುಳ್ಳರೆಲ್ಲ ಸೇರಿ ಕಟ್ಟುತ್ತಿರುವ ಸಾಮ್ರಾಜ್ಯದ ಒಂದು ಮುಖ ಸಿದ್ದರಾಮಯ್ಯನವರ ರೂಪದಲ್ಲಿ ಮತಾಂತರ ನಿಷೇಧ ಕಾಯಿದೆಯ ಸಂದರ್ಭದಲ್ಲಿ ಹೊರಬಿತ್ತು.
ಇಂದಿನ ಯುವಜನತೆ @INCIndia ದ ಸಂಸ್ಕೃತಿ ಅಂದರೆ ಭ್ರಷ್ಟಾಚಾರ, ಹೊಣೆಗೇಡಿತನ ಅಂದುಕೊಂಡಿದ್ದರು, ರೌಡಿಸಂ ಕೂಡಾ ಅದರ ಅವಿಭಾಜ್ಯ ಅಂಗ ಅನ್ನುವುದು ಈಗ ಜಗಜ್ಜಾಹೀರಾಗಿದೆ.
ಮುಜುಗರವಿಲ್ಲದೆ ಈ “ರಿಪಬ್ಲಿಕ್ ಆಫ್ ರೌಡಿಸಂ” ಅನ್ನು ಸಮರ್ಥಿಸಿಕ್ಕೊಳ್ಳುವ ವ್ಯಕ್ತಿಗಳು ಕೂಡಾ ಕಾಂಗ್ರೆಸ್ ಕುಸಂಸ್ಕೃತಿಯ ಪಾಲುದಾರರು.#ಕಾಂಗ್ರೆಸ್ಗೂಂಡಾಗಿರಿ
— C T Ravi
Read more
[wpas_products keywords=”deal of the day”]