Karnataka news paper

ಕಾಶ್ಮೀರ ಎನ್ಕೌಂಟರ್ ನಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಸಲೀಂ ಪರ್ರೇ ಹತ


Online Desk

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಭಾರತೀಯ ಸೇನೆ ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಎನ್ ಕೌಂಟರ್ ನಲ್ಲಿ ಲಷ್ಕರ್ ಉಗ್ರ ಸಂಘಟನೆಯ ಮೋಸ್ಟ್ ವಾಂಟೆಡ್ ಉಗ್ರ ಸಲೀಂ ಪರ್ರೆಯನ್ನು ಹೊಡೆದುರುಳಿಸಿದೆ.

ಸೋಮವಾರ ನಗರದ ಕಾಶ್ಮೀರ ಹೊರವಲಯದಲ್ಲಿರುವ ಹರ್ವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಹಾಗೂ ಲಷ್ಕರ್-ಎ-ತೊಯ್ಬಾ ಕಮಾಂಡರ್ ಸಲೇಂ ಪರ್ರೆಯನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಕಾಶ್ಮೀರ ವಲಯದ ಐಜಿಪಿ  ವಿಜಯ್ ಕುಮಾರ್ ಅವರು ಮಾಹಿತಿ ನೀಡಿದ್ದು, ಉಗ್ರರ ಇರುವಿಕೆ ಕುರಿತು ಮಾಹಿತಿ ಪಡೆದ ಭದ್ರತಾ ಪಡೆಗಳು ಉಗ್ರರನ್ನು ಸುತ್ತುವರೆದಾಗ ತಪ್ಪಿಸಿಕೊಳ್ಳಲು ಉಗ್ರರು ಗುಂಡಿನ ಸುರಿಮಳೆಗರೆದರು. ಈ ವೇಳೆ ಸೇನೆ ಪ್ರತಿದಾಳಿ ಮಾಡಿದ್ದು, ದಾಳಿಯಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಹಾಗೂ ಲಷ್ಕರ್-ಎ-ತೊಯ್ಬಾ ಕಮಾಂಡರ್ ಸಲೇಂ ಪರ್ರೆ ಹತನಾಗಿದ್ದಾನೆ ಎಂದು ತಿಳಿದುಬಂದಿದೆ ಎಂದು ಹೇಳಿದ್ದಾರೆ.

ಘಟನಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ನಾಕಾಬಂದಿ ಹೇರಲಾಗಿದೆ ಎಂದು ಹೇಳಿದ್ದಾರೆ.





Read more

[wpas_products keywords=”deal of the day”]