ಹೈಲೈಟ್ಸ್:
- ಸೋನು ಗೌಡ & ನಿಶಾನ್ ನಾಣಯ್ಯ ನಟನೆಯ ‘ವೆಡ್ಡಿಂಗ್ ಗಿಫ್ಟ್’ ಸಿನಿಮಾ
- 37 ದಿನಗಳಲ್ಲಿ ‘ವೆಡ್ಡಿಂಗ್ ಗಿಫ್ಟ್’ ಸಿನಿಮಾದ ಶೂಟಿಂಗ್ ಕಂಪ್ಲೀಟ್
- ‘ವೆಡ್ಡಿಂಗ್ ಗಿಫ್ಟ್’ ಸಿನಿಮಾದಲ್ಲಿ ವಕೀಲೆ ಪಾತ್ರ ಮಾಡಿದ ನಟಿ ಪ್ರೇಮಾ
‘ಶೂಟಿಂಗ್ ಆದ್ಮೇಲೆ ತುಂಬ ಯೋಚಿಸ್ತಿದ್ದೆ’- ಸೋನು
‘ನಾನು ಚಿತ್ರೀಕರಣ ಮುಗಿಸಿ ಬಂದ ಮೇಲೆ ರಾತ್ರಿ ಕೊರಗುತ್ತಿದ್ದೆ. ನಾನು ಮಾಡಿದ್ದು, ಸರಿನಾ? ತಪ್ಪಾ? ಅಂತ ಯೋಚಿಸುತ್ತಿದ್ದೆ. ನನ್ನ ತಂಗಿ ಇದನ್ನು ಸರಿ ಮಾಡಿದಳು. ನೀನು ಚಿತ್ರದ ಪಾತ್ರಗಳನ್ನು ಚಿತ್ರೀಕರಣ ಮುಗಿಯುತ್ತಿದ್ದಂತೆಯೇ ಅಲ್ಲೇ ಬಿಟ್ಟುಬಿಡಬೇಕು. ಮನೆಗೆ ಬಂದ ಮೇಲೆ ನೀನು ಸೋನು ಗೌಡ ಆಗಿಯೇ ಇರಬೇಕು ಎಂದಳು. ಈಗ ಹಾಗೆ ಮಾಡುತ್ತಿದ್ದೇನೆ. ನಾನು ಈವರೆಗೂ ಇಂತಹ ಪಾತ್ರ ಮಾಡಿಲ್ಲ ಅನ್ನಬಹುದು. ಆಕಾಂಕ್ಷಾ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನೊಂದ ಮನಸ್ಸುಗಳಿಗೆ ಹತ್ತಿರವಾಗುವ ಪಾತ್ರ ನನ್ನದು. ಉತ್ತಮ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ವಿಕ್ರಮ್ ಪ್ರಭು ಅವರಿಗೆ ಧನ್ಯವಾದ’ ಎನ್ನುತ್ತಾರೆ ಸೋನು ಗೌಡ.
‘ನಾನು ಮೂಲತಃ ಮಂಗಳೂರಿನವನು. ಈಗ ಪುಣೆಯಲ್ಲಿದ್ದೇನೆ. ಹದಿನೆಂಟು ವರ್ಷಗಳ ಹಿಂದೆ ರಾಜೇಂದ್ರ ಸಿಂಗ್ ಬಾಬು ಅವರ ‘ಲವ್’ ಚಿತ್ರಕ್ಕೆ ಕೆಲಸ ಮಾಡಿದ್ದೆ. ಆನಂತರ ಚಿತ್ರರಂಗದಿಂದ ದೂರವಾಗಿದೆ. ಈಗ ಮತ್ತೆ ಬಂದಿದ್ದೀನಿ. ‘ವೆಡ್ಡಿಂಗ್ ಗಿಫ್ಟ್’ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದೇನೆ. ನಮ್ಮ ಪ್ರಕಾರ ಡಿಸೆಂಬರ್ 31ರಂದು ಚಿತ್ರೀಕರಣ ಪೂರ್ಣವಾಗಬೇಕಿತ್ತು. ಒಂದು ದಿನ ಮೊದಲೇ, ಅಂದರೆ, 30ರಂದೇ ಚಿತ್ರೀಕರಣ ಮುಗಿದಿದೆ. ಬೆಂಗಳೂರು, ತುಮಕೂರು, ಉಡುಪಿ, ಮಂಗಳೂರು ಮುಂತಾದ ಕಡೆ ಮೂವತ್ತೇಳು ದಿನಗಳ ಚಿತ್ರೀಕರಣ ನಡೆದಿದೆ’ ಎಂದು ಮಾಹಿತಿ ನೀಡುತ್ತಾರೆ ನಿರ್ಮಾಪಕ/ನಿರ್ದೇಶಕ ವಿಕ್ರಮ್ ಪ್ರಭು.
‘ನಿಮ್ಮ ತಾಯಿ ಪಾತ್ರ ಮಾಡ್ತಿನಿ..’ ಅಂತ ಅಪ್ಪು ಸರ್‌ಗೆ ರೇಗಿಸಿದ್ದೆ..’- ನಟಿ ಸೋನು ಗೌಡ
‘ಗಂಡ-ಹೆಂಡತಿ ನಡುವೆ ನಡೆಯುವ ಕಥಾಹಂದರ. ಸೆಕ್ಷನ್ 498 ಸಂಬಂಧಿಸಿದ ಕೆಲವು ಸನ್ನಿವೇಶಗಳು ನಮ್ಮ ಚಿತ್ರದಲ್ಲಿದೆ. ಗಂಡ-ಹೆಂಡತಿ ಕೊನೆಗೆ ಒಂದಾಗುತ್ತಾರಾ? ಇಲ್ಲವಾ? ಎಂಬುದನ್ನು ಚಿತ್ರದಲ್ಲಿ ನೋಡಬೇಕು. ನಿಶಾನ್ ನಾಣಯ್ಯ-ಸೋನು ಗೌಡ ಮುಖ್ಯಭೂಮಿಕೆಯಲ್ಲಿದ್ದಾರೆ. ವಕೀಲೆ ಪಾತ್ರದಲ್ಲಿ ನಟಿ ಪ್ರೇಮ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಏಪ್ರಿಲ್ ವೇಳೆಗೆ ಚಿತ್ರ ಬಿಡುಗಡೆಯಾಗಲಿದೆ’ ಎನ್ನುತ್ತಾರೆ ವಿಕ್ರಮ್ ಪ್ರಭು. ಬಾಲಚಂದ್ರ ಪ್ರಭು ಸಂಗೀತ ನಿರ್ದೇಶನ ಮಾಡಿದ್ದಾರೆ. ಉದಯ ಲೀಲಾ ಛಾಯಾಗ್ರಹಣ ಮಾಡಿದ್ದು, ವಿಜೇತ್ ಚಂದ್ರ ಸಂಕಲನ ಮಾಡಿದ್ದಾರೆ.
‘ಈ ಪಾತ್ರ ಮಾಡಿರೋದು ನಾನೇನಾ ಅನ್ನೋ ಅನುಮಾನ ಎಲ್ಲರಿಗೂ ಬರತ್ತೆ..’- ನಟಿ ಸೋನು ಗೌಡ
Read more
[wpas_products keywords=”deal of the day party wear dress for women stylish indian”]