Karnataka news paper

ಕಲ್ಯಾಣ ಕರ್ನಾಟಕದಲ್ಲಿ 14 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಶುರು: ಸಿಎಂ ಬೊಮ್ಮಾಯಿ


ಹೈಲೈಟ್ಸ್‌:

  • ಶಿಕ್ಷಣ ಇಲಾಖೆಯಲ್ಲಿ 5,000 ಹುದ್ದೆಗಳ ಭರ್ತಿ ಆಗಲಿದೆ
  • ವಿವಿಧ ಇಲಾಖೆಗಳಿಗೆ ಒಟ್ಟು 14,000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಬಾಕಿ ಇದೆ
  • ಕೆಕೆಆರ್ ಡಿಬಿ ಬೋರ್ಡ್ ಕೂಡಾ ಇನ್ನಷ್ಟೇ ರಚನೆ ಆಗಬೇಕಿದೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ 14,000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 14,000 ಹುದ್ದೆಗಳ ನೇಮಕಾತಿಗೆ ಆರ್ಥಿಕ ಅನುಮತಿ ನೀಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ 5,000 ಹುದ್ದೆಗಳೂ ಸೇರಿದಂತೆ ವಿವಿಧ ಇಲಾಖೆಗಳಿಗೆ ಒಟ್ಟು 14,000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

ಕೆಕೆಆರ್ ಡಿಬಿ ಬೋರ್ಡ್ ರಚನೆಯಾಗದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಈ ವಾರದಲ್ಲಿ ಕೆಕೆಆರ್ ಡಿಬಿಗೆ ಪೂರ್ಣ ಪ್ರಮಾಣದ ಅಧಿಕಾರಿಗಳನ್ನು ನೀಡಲಾಗುವುದು. ಇನ್ನೆರಡು ದಿನಗಳಲ್ಲಿ ಕೆಕೆಆರ್ ಡಿಬಿ ಮಂಡಳಿಯ ರಚನೆ ಆಗಲಿದೆ. ಮಂಡಳಿಗೆ 3000 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಓಮಿಕ್ರಾನ್ ಭೀತಿ: ಬೆಳಗಾವಿ ಗಡಿ ಪ್ರದೇಶದ ಚೆಕ್‌ಪೋಸ್ಟ್‌ಗಳಲ್ಲಿ ಬಿಗಿ ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ
ಮಂಗಳವಾರ ಸಂಜೆ ಕೋವಿಡ್ ಸಭೆ: ಮಂಗಳವಾರ ಸಂಜೆ ಟಾಸ್ಕ್ ಫೋರ್ಸ್, ತಜ್ಞರ ಸಮಿತಿ ಸಮ್ಮುಖದಲ್ಲಿ ಕೋವಿಡ್ ಬಗ್ಗೆ ಸಭೆ ಜರುಗಲಿದೆ. ವಿಶ್ವದಲ್ಲಿ ಪುನಃ ಕೊರೊನಾ ಹೆಚ್ಚಳವಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಭಾರತ ಸರ್ಕಾರ ಎಚ್ಚರಿಕೆ ನೀಡಿ, ಹಲವಾರು ಮಾರ್ಗದರ್ಶನವನ್ನು ನೀಡಿದೆ. ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ಪರಿಣಾಮ ಕರ್ನಾಟಕದ ಮೇಲೆಯೂ ಆಗುತ್ತದೆ. ಗಡಿಗಳಲ್ಲಿ ಕಠಿಣ ಕ್ರಮಗಳನ್ನು ಜಾರಿ ಮಾಡಲಾಗಿದೆ. ಎರಡು ಡೋಸ್ ಲಸಿಕೆ ಹಾಗೂ ಆರ್ ಟಿ ಪಿಸಿಆರ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಕರ್ನಾಟಕದಲ್ಲಿ ಕಳೆದೊಂದು ವಾರದಿಂದ ಕೋವಿಡ್ ಹಾಗೂ ಒಮಿಕ್ರಾನ್ ಪ್ರಕರಣಗಳಲ್ಲಿ ಏರಿಕೆಯಾಗಿದೆ. ಕೋವಿಡ್ ನಿಯಂತ್ರಣಕ್ಕೆ ಬರುವ ದಿನಗಳಲ್ಲಿ ದೀರ್ಘಾವಧಿಯ ಯೋಜನೆಯನ್ನು ರೂಪಿಸಬೇಕಾಗಿದೆ ಎಂದು ತಿಳಿಸಿದರು.

ಕೋವಿಡ್ ನ 1 ಹಾಗೂ 2 ನೇ ಅಲೆ ನಿರ್ವಹಣೆಯ ಅನುಭವ ಹೊಂದಿದ್ದು, ಆರೋಗ್ಯ ಮೂಲ ಸೌಕರ್ಯಗಳನ್ನು ವೃದ್ಧಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಬೆಡ್ಸ್, ಐಸಿಯು, ಆಕ್ಸಿಜನ್ ಬೆಡ್ಸ್ ಗಳನ್ನು ಹೆಚ್ಚಿಸಲಾಗಿದೆ. ಜಿಲ್ಲೆಗಳಿಂದ ಔಷಧಿಗಳ ಬೇಡಿಕೆಯನ್ನು ತರಿಸಿಕೊಳ್ಳಲಾಗಿದೆ. ಚಿಕಿತ್ಸಾ ಸೌಲಭ್ಯಗಳಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ತಜ್ಞರ ಸಲಹೆಯ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಹಾರಾಷ್ಟ್ರ ಹಾಗೂ ಕೇರಳ ಜಿಲ್ಲೆಗಳ ಗಡಿ ಪ್ರದೇಶಗಳ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬುದಕ್ಕೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಗಡಿ ಪ್ರದೇಶಗಳು ವ್ಯಾಪಕವಾಗಿದೆ. ಪ್ರಮುಖ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಆಗುತ್ತಿವೆ. ಗಡಿ ಸಂಪರ್ಕವಿರುವ ಹಳ್ಳಿಗಳ ಮಟ್ಟದಲ್ಲಿ ತಪಾಸಣೆ ನಡೆಸಲು ಸಿಬ್ಮಂದಿ ನಿಯೋಜಿಸಿ ಚೆಕ್ ಪೋಸ್ಟ್ ಮಾಡುವ ಜೊತೆಗೆ ಆಯಾ ವ್ಯಾಪ್ತಿಯ ಪೊಲೀಸ್ ಸ್ಟೇಷನ್‌ಗಳಿಗೆ ಈ ಹೊಣೆಗಾರಿಕೆಯನ್ನು ವಹಿಸಲಾಗುವ ಬಗ್ಗೆ ಮಂಗಳವಾರ ಸಂಜೆ ಸಭೆಯಲ್ಲಿ ಸೂಚಿಸಲಾಗುವುದು ಎಂದರು.

ಕೊರೊನಾ 3ನೇ ಅಲೆ ಕಾರಣ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಸಿಎಂ ಹೇಳಿದ್ದು ಹೀಗೆ..
ಆರ್ಥಿಕ ಚಟುವಟಿಕೆಗಳ ಜೊತೆಗೆ ಸುರಕ್ಷತಾ ಕ್ರಮಗಳ ಬಗ್ಗೆ ಚಿಂತನೆ: ಲಾಕ್ ಡೌನ್, ಸೆಮಿ ಲಾಕ್ ಡೌನ್, ವೀಕೆಂಡ್ ಲಾಕ್ ಡೌನ್ ಹೇರುವ ಸಾಧ್ಯತೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಕೋವಿಡ್ ನ ಸ್ಥಿತಿಗತಿ, ಮುಂದಿನ ದಿನಗಳಲ್ಲಿ ಆಗಬಹುದಾದ ಬೆಳವಣಿಗೆ ಬಗ್ಗೆ ಮಂಗಳವಾರದ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಗಲಾಗುವುದು. ಕೋವಿಡ್‌ನ ಎರಡೂ ಅಲೆಗಳ ಸಂದರ್ಭದಲ್ಲಿ ಆರ್ಥಿಕ ಹಿಂಜರಿಕೆ ಉಂಟಾಗಿತ್ತು. ಈಗ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದೆ. ಆದ್ದರಿಂದ ಆರ್ಥಿಕ ಚಟುವಟಿಕೆಗಳಿಗೂ ತೊಂದರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ಸುರಕ್ಷತಾ ಕ್ರಮಗಳ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದರು.

ಜನರ ಸಹಕಾರ ಬಹಳ ಮುಖ್ಯ: ಕೋವಿಡ್ ನಿಯಂತ್ರಣದಲ್ಲಿ ಜನರ ಸಹಕಾರ ಬಹಳ ಮುಖ್ಯ. ರಾಜ್ಯ ಸರ್ಕಾರದ ನಿಯಂತ್ರಣ ಕ್ರಮಗಳು ಹಾಗೂ ಮಾರ್ಗಸೂಚಿಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ರಾಮನಗರದಲ್ಲಿ ಸೋಮವಾರ ನಡೆದ ಘಟನೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಈ ರೀತಿಯ ವರ್ತನೆ ನಮ್ಮ ಕರ್ನಾಟಕದ ಸಂಸ್ಕೃತಿ ಅಲ್ಲ. ಮಾತಿನ ಮೂಲಕ ಸೌಹಾರ್ದಯುತವಾಗಿ ತಮ್ಮ ವಿಚಾರಗಳನ್ನು ವ್ಯಕ್ತಪಡಿಸಬಹುದೇ ಹೊರತು ಇಂತಹ ವರ್ತನೆ ಯಾರಿಗೂ ಶೋಭೆ ತರುವಂಥದಲ್ಲ ಎಂದು ತಿಳಿಸಿದರು.

ಲಾಕ್ ಡೌನ್, ಸೆಮಿ ಲಾಕ್‌ಡೌನ್; ತಜ್ಞರ ಸಭೆಯ ಬಳಿಕವೇ ಅಂತಿಮ ನಿರ್ಧಾರ, ಬಸವರಾಜ ಬೊಮ್ಮಾಯಿ



Read more

[wpas_products keywords=”deal of the day sale today offer all”]