The New Indian Express
ಮೈಸೂರು: ವಕೀಲ ಗಂಗಾಧರ ಗೌಡ ಹತ್ಯೆಯನ್ನು ವಿರೋಧಿಸಿ ವಿಠ್ಲೇನಹಳ್ಳಿಯಿಂದ ಜೆಡಿಎಸ್ ನಾಯಕ ಎಚ್‌ಡಿ ದೇವೇಗೌಡರು ಕೈಗೊಂಡ ಪಾದಯಾತ್ರೆ ಯಾವುದು? ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ನಡೆಸಿದ್ದ ರಥಯಾತ್ರೆ ಯಾವುದು ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮೇಕೆದಾಟು ಪಾದಯಾತ್ರೆಯನ್ನು ರಾಜಕೀಯ ಯಾತ್ರೆ ಎಂದು ಬಿಜೆಪಿ ಬಣ್ಣಿಸುತ್ತಿರುವುದಕ್ಕೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ನಡೆಸಿದ್ದ ರಥಯಾತ್ರೆ ಯಾವುದು ಎಂದು ಪ್ರಶ್ನಿಸಿದರು.
ಮೇಕೆದಾಟು ಜಾರಿ ವಿರೋಧಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ನ ಮೊರೆ ಹೋಗಿದ್ದರೂ, ನ್ಯಾಯಾಲಯ ಅವರ ಮನವಿಯನ್ನು ಪುರಸ್ಕರಿಸಿ ಯಾವುದೇ ರೀತಿಯ ತಡೆಯಾಜ್ಞೆ ನೀಡಿಲ್ಲ. ತಮಿಳುನಾಡಿನ ತಮ್ಮ ಪಾಲಿನ ನೀರನ್ನು ಪಡೆಯುವ ಹಕ್ಕು ಬಿಟ್ಟರೆ ಕಾವೇರಿ ವಿಚಾರದಲ್ಲಿ ತಕರಾರು ಎತ್ತುವ ಇನ್ಯಾವುದೇ ರೀತಿಯ ಕಾನೂನು ಹಕ್ಕುಗಳು ಇಲ್ಲ ಎಂದರು.
ಇದನ್ನೂ ಓದಿ: ಡಬಲ್ ಇಂಜಿನ್ ಸರ್ಕಾರವೇಕೆ 3 ವರ್ಷಗಳಲ್ಲಿ ಮೇಕೆದಾಟು ಯೋಜನೆ ಪೂರ್ಣಗೊಳಿಸಲಿಲ್ಲ: ಸಿದ್ದರಾಮಯ್ಯ
ತಮಿಳುನಾಡಿನ ಪಾಲಿನ 177.25 ಟಿ.ಎಂ.ಸಿ ನೀರಿನ ಜೊತೆಗೆ ಈ ವರ್ಷ ಸುಮಾರು 200 ಟಿ.ಎಂ.ಸಿ ಕಾವೇರಿ ನೀರು ವ್ಯರ್ಥವಾಗಿ ಸಮುದ್ರ ಪಾಲಾಗಿದೆ ಎಂಬ ಮಾಹಿತಿ ಇದೆ. ಈ ವ್ಯರ್ಥವಾಗುವ ನೀರನ್ನು ಸದ್ಬಳಕೆ ಮಾಡಲು ರೂಪಿಸಿರುವ ಯೋಜನೆಯೇ ಮೇಕೆದಾಟು ಅಣೆಕಟ್ಟು. ತಮಿಳುನಾಡು ಸರ್ಕಾರ ಕೇವಲ ರಾಜಕೀಯ ಕಾರಣಕ್ಕೆ ಈ ಯೋಜನೆಗೆ ವಿರೋಧ ಮಾಡುತ್ತಿದೆ ಅಷ್ಟೆ.
ಇದನ್ನೂ ಓದಿ: ಸತ್ಯಕ್ಕೆ ಸಮಾಧಿ ಕಟ್ಟಿ ‘ಸುಳ್ಳಿನ ಯಾತ್ರೆ’ಗೆ ಹೊರಟವರ ಜಾತಕ ದಾಖಲೆಗಳೇ ಬೆತ್ತಲು ಮಾಡುತ್ತಿವೆ: ಸರಣಿ ಟ್ವೀಟ್ ಮೂಲಕ ಹೆಚ್’ಡಿಕೆ ವಾಗ್ದಾಳಿ
ಮಳೆಗಾಲದಲ್ಲಿ ಹೆಚ್ಚುವರಿಯಾಗಿ ಹರಿದು ಹೋಗುವ 66 ಟಿ.ಎಂ.ಸಿ ನೀರನ್ನು ಸಂಗ್ರಹಿಸಿಟ್ಟು, ಬೇಸಿಗೆಯಲ್ಲಿ ನೀರಿನ ಕೊರತೆಯಾದಾಗ ತಮಿಳುನಾಡಿಗೂ ಬಿಡಲು ಅನುಕೂಲವಾಗುತ್ತೆ, ನಮ್ಮಲ್ಲಿ ಅಗತ್ಯ ಇರುವ ಕಡೆಗೆ ಕುಡಿಯುವ ನೀರನ್ನು ಒದಗಿಸಲು ಬಳಕೆ ಮಾಡಿಕೊಳ್ಳಲೂಬಹುದು. ವಿದ್ಯುತ್ ಉತ್ಪಾದನೆಗೆ ಬಳಕೆಯಾಗುವ ನೀರು ಕೂಡ ತಮಿಳುನಾಡಿಗೆ ಹರಿದು ಹೋಗುತ್ತೆ. ಇದರಿಂದಾಗಿ ನಮ್ಮ ಬೇರೆ ಬೇರೆ ಜಲಾಶಯಗಳಲ್ಲಿ ಸಂಗ್ರಹವಾಗುವ ನೀರನ್ನು ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ವಿವಿಧ ಜಿಲ್ಲೆಗಳ ಜನರ ಉಪಯೋಗಕ್ಕೆ ಕೊಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
Read more
[wpas_products keywords=”deal of the day”]