The New Indian Express
ಬೆಂಗಳೂರು: ಡಾ ಬಿ ಆರ್ ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡ ಪ್ರತಿಮೆಗಳ ಅನಾವರಣ ಕಾರ್ಯಕ್ರಮ ಪೂರ್ವ ನಿರ್ಧರಿತವಾಗಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಹಲವು ಸಭೆಗಳನ್ನು ನಡೆಸಲಾಗಿತ್ತು. ನಿನ್ನೆ ರಾಮನಗರದಲ್ಲಿ ಸಮಾರಂಭದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಪ್ರಚೋದಿಸಿದವರು ಯಾರು ಎಂದು ಮಾಧ್ಯಮಗಳ ಸಾಕ್ಷಿಯಿದೆ. ಆರ್ ಎಸ್ ಎಸ್, ಬಿಜೆಪಿ ಇದಕ್ಕೆ ಕಾರಣವೇ ಅಲ್ಲ. ಇದೊಂದು ದುರುದೃಷ್ಟಕರ ಘಟನೆ. ಇದಕ್ಕೆ ಸಂಬಂಧಪಟ್ಟ ಜನರು ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದರು.
ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಹೇಳಿಕೆ ಮತ್ತು ಆರೋಪಕ್ಕೆ ಪ್ರತಿಕ್ರಿಯೆ ನೀಡುತ್ತಾ ಈ ರೀತಿ ಉತ್ತರಿಸಿದ್ದಾರೆ.
ಇದನ್ನೂ ಓದಿ: ರಾಮನಗರ: ಮುಖ್ಯಮಂತ್ರಿ ಬೊಮ್ಮಾಯಿ ಸಮ್ಮುಖ ವೇದಿಕೆಯಲ್ಲೇ ಸಂಸದ ಡಿಕೆ ಸುರೇಶ್, ಸಚಿವ ಅಶ್ವತ್ಥ ನಾರಾಯಣ ಕಿತ್ತಾಟ!
ಮುಖ್ಯಮಂತ್ರಿಗಳು ಮಾಗಡಿ ತಾಲ್ಲೂಕಿನ ಚಿಕ್ಕಕಲ್ಯ ಗ್ರಾಮದಲ್ಲಿ ಪ್ರತಿಮೆ ಅನಾವರಣ ನಂತರ ಈ ಹೇಳಿಕೆ ನೀಡಿದ್ದಾರೆ. ಮೇಕೆದಾಟು ಯೋಜನೆಗೆ ಸಂಬಂಧಿಸಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ಕೈಗೊಳ್ಳುತ್ತಿರುವುದು ಅದು ರಾಜಕೀಯ ಪ್ರೇರಿತ. ತಮಿಳು ನಾಡಿನಲ್ಲಿ ಬಿಜೆಪಿ ನಾಯಕರನ್ನು ಪಾದಯಾತ್ರೆ ವಿರೋಧಿಸಲು ಕರೆಸಿಕೊಳ್ಳಲಾಗುತ್ತಿದೆ ಎಂದು ಸಿದ್ದರಾಮಯ್ಯನವರು ಆರೋಪಿಸುತ್ತಿದ್ದಾರೆ. ಹಾಗಾದರೆ ಮೇಕೆದಾಟು ಯೋಜನೆಗೆ ಇಲ್ಲಿನ ಕಾಂಗ್ರೆಸ್ ನಾಯಕರು ನಡೆಸಲು ಉದ್ದೇಶಿಸಿರುವ ಪಾದಯಾತ್ರೆಗೆ ತಮಿಳು ನಾಡಿನ ಕಾಂಗ್ರೆಸ್ ಬೆಂಬಲ ನೀಡುತ್ತದೆಯೇ ಎಂದು ಕೇಳಿದರು.
ನಾವು ಕನ್ನಡಿಗರೆಲ್ಲರೂ ಕನ್ನಡ ಭಾಷೆ, ನೆಲ-ಜಲ ವಿಚಾರವಾಗಿ ಒಗ್ಗಟ್ಟು ಪ್ರದರ್ಶಿಸಬೇಕು. ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ ಕೇಂದ್ರ ಜಲ ಆಯೋಗದ ಮುಂದಿದೆ. ಈ ಯೋಜನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು ಶೀಘ್ರವೇ ಆರಂಭಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
Read more
[wpas_products keywords=”deal of the day”]