Karnataka news paper

ಬಂಡೆ ಕಲ್ಲುಗಳನ್ನೇ ನುಂಗಿ ನೀರು ಕುಡಿದ ಕನಕಪುರದ ರೌಡಿ ಬ್ರದರ್ಸ್: ಕನಕಾಸುರರೇ, ಕರ್ನಾಟಕ ಲಾಲೂ ಕಾಲದ ಬಿಹಾರವಲ್ಲ!


Online Desk

ಬೆಂಗಳೂರು: ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿದ್ದ ವೇದಿಕೆಯಲ್ಲೇ ನಡೆದ ವಾಕ್ಸಮರ ಕುರಿತಂತೆ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಬಂಡೆ ಕಲ್ಲುಗಳನ್ನೇ ನುಂಗಿ ನೀರು ಕುಡಿದ ಕನಕಪುರದ ರೌಡಿ ಸಹೋದರರಲ್ಲೊಬ್ಬರು ಮುಖ್ಯಮಂತ್ರಿಗಳಿದ್ದ ವೇದಿಕೆಯಲ್ಲೇ ಅಟ್ಟಹಾಸ ಮೆರೆದಿದ್ದಾರೆ, ಹಾಗಾದರೇ ಭೂಗತರಾಗಿ ಏನೇನು ಮಾಡಿರಬಹುದು? ಕೊತ್ವಾಲನ ಶಿಷ್ಯರ ವಿರುದ್ಧ ಅರಣ್ಯ ಇಲಾಖೆಯ ಅಧಿಕಾರಿಗಳು ಸಲ್ಲಿಸಿದ್ದ ಕ್ರಿಮಿನಲ್ ಮೊಕದ್ದಮೆಗಳೇ ರೌಡಿ ಡಿಕೆಬ್ರದರ್ಸ್‌ ಗಳ ಇತಿಹಾಸ ಹೇಳುತ್ತದೆ ಎಂದು ಲೇವಡಿ ಮಾಡಿದೆ.

ಇದನ್ನೂ ಓದಿ: ಡಿ.ಕೆ. ಸುರೇಶ್, ಅಶ್ವತ್ಥ ನಾರಾಯಣ ಕಿತ್ತಾಟ: ಬಿಜೆಪಿ ಖಂಡನೆ; ಕಮಲ ನಾಯಕರಿಂದ ವೇದಿಕೆಗಳಲ್ಲಿ ಪ್ರಚೋದನೆ: ಡಿಕೆಶಿ

ಕನಕಪುರದ ನೈಸರ್ಗಿಕ ಸಂಪತ್ತೆಲ್ಲವೂ ಒಂದೇ ಕುಟುಂಬದ ಸ್ವತ್ತು ಎಂಬಂತೆ  ರೌಡಿ ಡಿಕೆ ಬ್ರದರ್ಸ್‌ ನೋಡಿಕೊಂಡಿದ್ದಾರೆ. ಅಧಿಕಾರದ ರುಚಿ ನೋಡುವುದಕ್ಕೆ ಮುನ್ನವೇ ಶ್ರೀಗಂಧದ ಕಳ್ಳಸಾಗಣೆ ಮಾಡುತ್ತಿದ್ದವರು ಈಗ ಸರ್ಕಾರಿ ಯಂತ್ರವನ್ನೇ ಬೆದರಿಸುವ ಉಡಾಫೆತನ ತೋರಿದ್ದಾರೆ. ಕರ್ನಾಟಕ ಲಾಲೂ ಕಾಲದ ಬಿಹಾರವಲ್ಲ ಎಂಬುದು‌ ನೆನಪಿರಲಿ.

ತೋಳ್ಬಲ, ಅಕ್ರಮ ಸಂಪತ್ತಿನ ಬಲದಿಂದ ಮೆರೆಯುತ್ತಿರುವ ಕನಕಾಸುರರು ಕರ್ನಾಟಕದ ಅಧಿಕಾರ ಹಿಡಿದು ಶಾಂತಿ ಕದಡುವ ಯತ್ನ ನಡೆಸುತ್ತಿದ್ದಾರೆ.  ಇವರು ಅಧಿಕಾರಕ್ಕೆ ಬಂದರೆ ಕಂಡ ಕಂಡ ಖಾಲಿ ಜಾಗಕ್ಕೆ ಬೇಲಿ ಹಾಕುವುದರಲ್ಲಿ ಯಾವುದೇ ಅನುಮಾನವಿಲ್ಲ. ರಾಜ್ಯದ ಜನರು ಇಂತವರ ಕೈಗೆ ಎಂದಿಗೂ ಅಧಿಕಾರ ನೀಡಲಾರರು ಎಂದು ಬಿಜೆಪಿ ಟಾಂಗ್ ನೀಡಿದೆ.

ರಾಮನಗರ ಜಿಲ್ಲೆ ಎಂದರೆ “ಕನಕಪುರ ರಿಪಬ್ಲಿಕ್” ಎಂದು ಡಿಕೆ ಸಹೋದರರು ಭಾವಿಸಿದಂತಿದೆ. ನಿಮ್ಮ ಅಟ್ಟಹಾಸ, ದೌರ್ಜನ್ಯ, ರಾಜಕೀಯ ಮೇಲಾಟವನ್ನು ಎಲ್ಲ ಕಾಲಕ್ಕೂ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ಸಾರ್ವಜನಿಕ ಸಭೆಯಲ್ಲಿ ಸಂಸದ ಡಿಕೆ ಸುರೇಶ್ ಹಾಗೂ ಎಂಎಲ್ ಸಿ ರವಿ ಅವರ ವರ್ತನೆ ಅಕ್ಷಮ್ಯವಾದುದು ಎಂದು ಬಿಜೆಪಿ ಹೇಳಿದೆ.

ಕಾಂಗ್ರೆಸ್ ಸಂಸ್ಕೃತಿ ಎಂದರೆ ಗೂಂಡಾ ಸಂಸ್ಕೃತಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇರೆ ಬೇಕಿಲ್ಲ. ಒಬ್ಬ ಸಂಸದರಿಗೆ ರಾಜ್ಯದ ಮುಖ್ಯಮಂತ್ರಿ ಇರುವ ವೇದಿಕೆಯಲ್ಲಿ ಹೇಗೆ ವರ್ತಿಸಬೇಕೆಂಬ ಪರಿಜ್ಞಾನವಿಲ್ಲದಿರುವುದು ವಿಪರ್ಯಾಸ. ಯಥಾ ರಾಜ ತಥಾ ಪ್ರಜಾ ಎಂಬಂತೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ವರ್ತಿಸುತ್ತಿರುವುದು ಖಂಡನೀಯ.





Read more

[wpas_products keywords=”deal of the day”]