‘ಕಳೆದ ರಾತ್ರಿ ಜ್ವರ ಹಾಗೂ ಶೀತದ ಸೌಮ್ಯ ಲಕ್ಷಣ ಕಂಡು ಬಂದಿದ್ದರಿಂದ ನಾನು ಕೋವಿಡ್ ಟೆಸ್ಟ್‌ಗೆ ಒಳಗಾಗಿದ್ದೆ. ಈಗ ನನ್ನ ಕೋವಿಡ್ ಫಲಿತಾಂಶದಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ಹೀಗಾಗಿ ಕಳೆದ 24 ಗಂಟೆಯಲ್ಲಿ ನನ್ನೊಂದಿಗೆ ಸಂಪರ್ಕದಲ್ಲಿದ್ದ ವ್ಯಕ್ತಿಗಳು ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಿ. ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ರಣದೀಪ್ ಸಿಂಗ್ ಸುರ್ಜೇವಾಲ, ಜನವರಿ 9 ರಿಂದ 19ರ ವರೆಗೆ ರಾಜ್ಯ ಕಾಂಗ್ರೆಸ್ ವತಿಯಿಂದ ನಡೆಯಲಿರುವ ಮೇಕೆದಾಟು ಪಾದಯಾತ್ರೆಗೆ ರಣದೀಪ್ ಸಿಂಗ್ ಸುರ್ಜೇವಾಲ ಬರುವವರಿದ್ದರು. ಸದ್ಯ ಕೋವಿಡ್‌ಗೆ ತುತ್ತಾಗಿರುವುದರಿಂದ ಅವರು ಬರುವುದು ಅನುಮಾನ ಎನ್ನಲಾಗಿದೆ.
ದೆಹಲಿ ಸಿಎಂ ಕೇಜ್ರಿವಾಲ್‌ಗೂ ಸೋಂಕು
ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಲ್ಲಿ ಕೊರೊನಾ ವೈರಸ್ ಪಾಸಿಟಿವ್ ಪತ್ತೆಯಾಗಿದೆ. ಅವರು ಮನೆಯಲ್ಲಿಯೇ ಸ್ವತಃ ಪ್ರತ್ಯೇಕವಾಗಿ ಉಳಿದುಕೊಂಡಿದ್ದಾರೆ. ಈ ಮಾಹಿತಿಯನ್ನು ಅವರು ಮಂಗಳವಾರ ಬೆಳಿಗ್ಗೆ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ತಮ್ಮಲ್ಲಿ ಕೋವಿಡ್ 19 ಲಘು ಲಕ್ಷಣಗಳು ಇರುವುದಾಗಿ ತಿಳಿಸಿದ್ದಾರೆ.
‘ನನ್ನ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಕಂಡುಬಂದಿದೆ. ನನ್ನಲ್ಲಿ ಲಘು ಲಕ್ಷಣಗಳಿವೆ. ಮನೆಯಲ್ಲಿ ಸ್ವಯಂ ಐಸೋಲೇಟ್ ಆಗಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕಕ್ಕೆ ಬಂದವರು, ದಯವಿಟ್ಟು ನಿಮ್ಮನ್ನು ನೀವು ಐಸೋಲೇಟ್ ಮಾಡಿಕೊಳ್ಳಿ ಮತ್ತು ಪರೀಕ್ಷೆಗೆ ಒಳಗಾಗಿ’ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಅವರು ಪಂಜಾಬ್, ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಾಗಿ ಎಎಪಿ ಪರ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸಿದ್ದರು.
ದಿಲ್ಲಿಯಲ್ಲಿ ಓಮಿಕ್ರಾನ್ ಅಬ್ಬರ, ಟೆಸ್ಟ್‌ಗೆ ಕಳುಹಿಸಿದ ಕೊರೊನಾ ಸ್ಯಾಂಪಲ್‌ಗಳಲ್ಲಿ 84% ಓಮಿಕ್ರಾನ್!
ದಿಲ್ಲಿಯಲ್ಲಿ ಸೋಮವಾರ 4,099 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಶೇ 6.46ರಷ್ಟು ಪಾಸಿಟಿವಿಟಿ ದರ ದಾಖಲಾಗಿದೆ. 1509 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದು, ಒಬ್ಬರು ಮೃತಪಟ್ಟಿದ್ದಾರೆ. 6,288 ಕೋವಿಡ್ ರೋಗಿಗಳು ಮತ್ತು ಶಂಕಿತ ಕೋವಿಡ್ 19 ಪ್ರಕರಣಗಳನ್ನು ಹೋಮ್ ಐಸೋಲೇಷನ್‌ನಲ್ಲಿ ಇರಿಸಲಾಗಿದೆ.
‘ಕೋವಿಡ್ 19 ಪ್ರಕರಣಗಳು ದಿಲ್ಲಿಯಲ್ಲಿ ಸತತವಾಗಿ ಏರಿಕೆಯಾಗುತ್ತಿದೆ. ಆದರೆ ಜನರು ಆತಂಕಪಡುವ ಅಗತ್ಯವಿಲ್ಲ. ಪ್ರಸ್ತುತ ನಗರದಲ್ಲಿ ಸಕ್ರಿಯ ಪ್ರಕರಣಗಳು 6,360 ಇವೆ. ಇಂದು 3,100 ಹೊಸ ಪ್ರಕರಣಗಳು ವರದಿಯಾಗುವ ನಿರೀಕ್ಷೆ ಇದೆ. ಆದರೆ 246 ಮಂದಿ ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲ ಪ್ರಕರಣಗಳೂ ಲಘು ಲಕ್ಷಣ ಅಥವಾ ಲಕ್ಷಣ ರಹಿತ ಪ್ರಕರಣಗಳಾಗಿವೆ. ಹೀಗಾಗಿ ಕಳವಳ ಪಡುವ ಅಗತ್ಯವಿಲ್ಲ’ ಎಂದು ಅರವಿಂದ್ ಕೇಜ್ರಿವಾಲ್ ಭಾನುವಾರ ತಿಳಿಸಿದ್ದಾರೆ.
Read more
[wpas_products keywords=”deal of the day sale today offer all”]