Karnataka news paper

ಓಮಿಕ್ರಾನ್ ಭೀತಿ ನಡುವೆ ದೇಶದಲ್ಲಿ ಕೋವಿಡ್ ಸೋಂಕು ಉಲ್ಬಣ: 37,379 ಹೊಸ ಸೋಂಕು ಪ್ರಕರಣ ವರದಿ


Online Desk

ನವದೆಹಲಿ: ಓಮಿಕ್ರಾನ್ ಭೀತಿ ನಡುವೆಯೇ ದೇಶದಲ್ಲಿ ಕ್ರಮೇಣ ಕೋವಿಡ್-19 ಸೋಂಕು ಉಲ್ಬಣವಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 37,379 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 37,379 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, 124 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ದೇಶದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 4,82,017ಕ್ಕೆ ಏರಿಕೆಯಾಗಿದೆ. 

ಅಂತೆಯೇ ಸೋಂಕು ಉಲ್ಬಣ ಹಿನ್ನಲೆಯಲ್ಲಿ ದೇಶದಲ್ಲಿನ ದೈನಂದಿನ ಸೋಂಕು ಸಕಾರಾತ್ಮಕ ದರ ಕೂಡ ಏರಿಕೆಯಾಗಿದ್ದು, ಪ್ರಸ್ತುತ ದೇಶದಲ್ಲಿನ ಸೋಂಕು ಸಕಾರಾತ್ಮಕ ದರ ಶೇ.3.24ಕ್ಕೆ ಏರಿಕೆಯಾಗಿದೆ. ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ 11,007 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 3,43,06,414ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಪ್ರಸ್ತುತ 1,71,830 ಸಕ್ರಿಯ ಪ್ರಕರಣಗಳಿವೆ ಎನ್ನಲಾಗಿದೆ.

ದೇಶದಲ್ಲಿ ಕೋವಿಡ್ ಲಸಿಕೆ ಅಭಿಯಾನ ಮುಂದುವರೆದಿದ್ದು, ಈ ವರೆಗೂ ಒಟ್ಟಾರೆ 1,46,70,18,464 ಡೋಸ್ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.





Read more

[wpas_products keywords=”deal of the day”]