PTI
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಲ್ಗಾಮ್ ಜಿಲ್ಲೆಯ ಓಕೆ ಗ್ರಾಮದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದವು. ಈ ವೇಳೆ ಉಗ್ರರು ಭದ್ರತಾ ಪಡೆ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಅದು ಎನ್‌ಕೌಂಟರ್‌ಗೆ ತಿರುಗಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇದನ್ನು ಓದಿ: ಎನ್‍ಕೌಂಟರ್ ನಲ್ಲಿ ಎಲ್ಇಟಿ ಕಮಾಂಡರ್ ಸಲೀಂ ಪರ್ರೆ ಸೇರಿದಂತೆ ಇಬ್ಬರು ಉಗ್ರರ ಹತ್ಯೆ: ಪೊಲೀಸರಿಗೆ ಸಂದ ದೊಡ್ಡ ಯಶಸ್ಸು
ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಹತ್ಯೆಗೀಡಾದ ಇಬ್ಬರು ಉಗ್ರರು ಸ್ಥಳೀಯರಾಗಿದ್ದು, ಎಲ್‌ಇಟಿಗೆ ಸಂಬಂಧಿಸಿದವರು ಮತ್ತು ಅವರು ಹಲವು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ಐಜಿ(ಕಾಶ್ಮೀರ ವ್ಯಾಪ್ತಿ) ವಿಜಯ್ ಕುಮಾರ್ ಅವರು ಹೇಳಿದ್ದಾರೆ.
Read more
[wpas_products keywords=”deal of the day”]